ಮಾಧ್ಯಮ ಅಕಾಡೆಮಿ ಅಧ್ಯಕ್ಷರ ಅವಧಿ ಮುಕ್ತಾಯ: ಸರ್ಕಾರ ಆದೇಶ

7

ಮಾಧ್ಯಮ ಅಕಾಡೆಮಿ ಅಧ್ಯಕ್ಷರ ಅವಧಿ ಮುಕ್ತಾಯ: ಸರ್ಕಾರ ಆದೇಶ

Published:
Updated:

ಬೆಂಗಳೂರು: ವಾರ್ತಾ ಇಲಾಖೆ ವ್ಯಾಪ್ತಿಯಲ್ಲಿರುವ ಅಕಾಡೆಮಿ, ಮಂಡಳಿ ಹಾಗೂ ನಿಗಮಗಳ ಮೂವರು ಅಧ್ಯಕ್ಷರ ಅವಧಿ 11 ತಿಂಗಳು ಇರುವಾಗಲೇ ಅವಧಿ ಮುಕ್ತಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ಹಾಗೂ ಅಕಾಡೆಮಿಗಳು ಸೇರಿ 21 ಸಂಸ್ಥೆಗಳು ಇವೆ. ಈ ಎಲ್ಲ ಅಕಾಡೆಮಿಗಳ ಅಧ್ಯಕ್ಷರ ಅಧಿಕಾರ ಅವಧಿಯನ್ನು ಸರ್ಕಾರ ಮೊಟಕು ಮಾಡಿಲ್ಲ. ಆದರೆ, ವಾರ್ತಾ ಮತ್ತು ಸಂಪರ್ಕ ಇಲಾಖೆ ವ್ಯಾಪ್ತಿಯಲ್ಲಿರುವ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು, ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ರುದ್ರಪ್ಪ, ಕಂಠೀರವ ಸ್ಟುಡಿಯೊ ನಿಗಮದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ್ ಅವರ ಅವಧಿ ಮಾತ್ರ ಮುಕ್ತಾಯ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಜು, ‘ಹಿಂದಿನ ಯಾವ ಸರ್ಕಾರದ ಅವಧಿಯಲ್ಲೂ ಅಧಿಕಾರಾವಧಿಯನ್ನು ಹೀಗೆ ಏಕಾಏಕಿ ಮೊಟಕುಗೊಳಿಸಿದ ನಿದರ್ಶನ ಇರಲಿಲ್ಲ. ಒಂದೇ ಇಲಾಖೆಯ ವ್ಯಾಪ್ತಿಯಲ್ಲಿರುವ ಅಕಾಡೆಮಿಗಳಿಗೆ ಒಂದೇ ರೀತಿಯ ನಿಯಮ ಅನ್ವಯವಾಗಬೇಕಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಆದೇಶವನ್ನು ಪುನರ್ ಪರಿಶೀಲಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಅಲ್ಲಿಯವರೆಗೂ ಹುದ್ದೆಯಲ್ಲಿ ಮುಂದುವರಿಯುವಂತೆ ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನು ಕೋರಲಾಗಿದೆ’ ಎಂದು  ವಾರ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry