ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ರಾಯಭಾರ ಕಚೇರಿ ಆರಂಭಿಸಲು ಮನವಿ

Last Updated 31 ಮೇ 2018, 19:28 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕದ ರಾಯಭಾರ ಕಚೇರಿಯನ್ನು ಬೆಂಗಳೂರಿನಲ್ಲಿ ಆರಂಭಿಸುವಂತೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮೆರಿಕದ ನಿಯೋಗಕ್ಕೆ ಮನವಿ ಮಾಡಿದರು.

ಭಾರತದಲ್ಲಿನ ಅಮೆರಿಕದ ರಾಯಭಾರಿ ಕೆನ್ನೆತ್ ಜಸ್ಟರ್ ನೇತೃತ್ವದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ನಿಯೋಗದ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ, ರಾಯಭಾರ ಕಚೇರಿ ಆರಂಭಿಸುವುದಾದರೆ ಅಗತ್ಯವಿರುವ ಜಾಗ, ಇತರ ಮೂಲಸೌಕರ್ಯ ಸೇರಿದಂತೆ ಎಲ್ಲ ನೆರವು ನೀಡಲು ಬದ್ಧ ಎಂದೂ ಭರವಸೆ ನೀಡಿದರು.

ಮುಖ್ಯಮಂತ್ರಿಯ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಜಸ್ಟರ್, ಈ ಬಗ್ಗೆ ಉನ್ನತ ಹಂತದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.

ಅಮೆರಿಕದ ಸುಮಾರು 370 ಕಂಪನಿಗಳು ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಜಸ್ಟರ್ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪರಿಹಾರ ಒದಗಿಸುವಂತೆ ಜೊತೆಗಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಬೆಂಗಳೂರಿನ ಮೆಟ್ರೊ ರೈಲು, ಎಕ್ಸ್‌ಪ್ರೆಸ್‌ ಹೆದ್ದಾರಿ, ಸೇರಿದಂತೆ ಅಭಿವೃದ್ಧಿ ಕ್ರಮ ಕುರಿತು ನಿಯೋಗಕ್ಕೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT