ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲು

7

ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲು

Published:
Updated:

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ, ಜಯನಗರ ವಿಧಾನಸಭಾ ಕ್ಷೇತ್ರದ ವಾರ್ಡ್‌ 178 ಮತ್ತು 179ರ ಚುನಾವಣಾ ಸಿಬ್ಬಂದಿ ಜೆಡಿಎಸ್‌ ಪಕ್ಷದ ಪ್ರಚಾರ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆಯದೆ ಜೆಡಿಎಸ್‌ ಅಭ್ಯರ್ಥಿಯ, ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿದ ಟಾಟಾ ಏಸ್‌ ವಾಹನವನ್ನು ಜಯನಗರದ 8ನೇ ಬ್ಲಾಕ್‌ನ, 40ನೇ ಅಡ್ಡರಸ್ತೆಯಲ್ಲಿ ನಿಲ್ಲಿಸಿ ಪ್ರಚಾರ ನಡೆಸಲಾಗುತ್ತಿತ್ತು ಎಂದು ಸಿಬ್ಬಂದಿ ಜಯನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ರವಿಕೃಷ್ಣಾ ರೆಡ್ಡಿ ಬೆಂಬಲಿಗರ ವಿರುದ್ಧ ದೂರು: ಚುನಾವಣಾ ಆಯೋಗದಿಂದ ಅನುಮತಿ ಪಡೆಯದೆ, ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರ ಭಾವಚಿತ್ರವಿರುವ ಫ್ಲೆಕ್ಸ್‌ ಅನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಪ್ರದರ್ಶಿಸಿ, ಪ್ರಚಾರ ನಡೆಸುತ್ತಿದ್ದ ಅವರ ಬೆಂಬಲಿಗರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry