ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್‌ ಪಕ್ಷ ಜತೆಗಿದೆ: ಸಿದ್ದರಾಮಯ್ಯ ಟ್ವೀಟ್‌

7
ಮೋದಿ ಸರ್ಕಾರದಿಂದ ರಾಜಕೀಯ ದ್ವೇಷ: ಮಾಜಿ ಸಿಎಂ ಆರೋಪ

ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್‌ ಪಕ್ಷ ಜತೆಗಿದೆ: ಸಿದ್ದರಾಮಯ್ಯ ಟ್ವೀಟ್‌

Published:
Updated:
ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್‌ ಪಕ್ಷ ಜತೆಗಿದೆ: ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು: ಡಿ.ಕೆ. ಶಿವಕುಮಾರ್‌ ಆಪ್ತರ ಮನೆಗಳ ಮೇಲೆ ನಡೆದ ಸಿಬಿಐ ದಾಳಿ ಕುರಿತು ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿ ಸರ್ಕಾರದ ಬೆದರಿಕೆಗೆ ಬಗ್ಗುವುದಿಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ ಎಂದು ಗುಡುಗಿದ್ದಾರೆ.

ಕಾಂಗ್ರೆಸ್‌ ಮುಖಂಡರಾದ ಡಿ.ಕೆ. ಶಿವಕುಮಾರ್‌ ಹಾಗೂ ಸಹೋದರ ಡಿ.ಕೆ. ಸುರೇಶ್‌ ಅವರ ಆಪ್ತರ ಮನೆಗಳ ಮೇಲೆ ಗುರುವಾರ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಕೆಲ ತಿಂಗಳುಗಳ ಹಿಂದೆ ಶಿವಕುಮಾರ್‌ ಮನೆ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ಕುರಿತು ಟ್ವೀಟರ್‌ನಲ್ಲಿ, ‘ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು‌ ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ’ ಎಂದು ಪೋಸ್ಟ್‌ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry