ಜೂನ್ 13ರಂದು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಇಫ್ತಾರ್

7

ಜೂನ್ 13ರಂದು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಇಫ್ತಾರ್

Published:
Updated:
ಜೂನ್ 13ರಂದು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಇಫ್ತಾರ್

ಉಡುಪಿ: ಮುಸ್ಲಿಮರಿಗೆ ಇದೇ 13ರಂದು ನಗರ ಗೋವಿಂದ ಕಲ್ಯಾಣ ಮಂಟಪದಲ್ಲಿ ಇಫ್ತಾರ್ ಕೂಟ ಆಯೋಜಿಸಲು ನಿರ್ಧರಿಸಲಾಗಿದೆ. ಆದರೆ, ಇಫ್ತಾರ್ ಕೂಟದಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ಬಗ್ಗೆ ಮುಸ್ಲಿಂ ಸಮಾಜದ ಮುಖಂಡರಿಂದ ಇದುವರೆಗೂ ಒಮ್ಮತದ ತೀರ್ಮಾನವಾಗಿಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.

ಪೇಜಾವರ ಮಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದಬಾರಿ ಕೆಲವರು ಮಠದಲ್ಲಿ ಇಫ್ತಾರ್ ಕೂಟ ಆಯೋಜಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ದೇವರ ಮೂರ್ತಿ ಇರುವ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಆಕ್ಷೇಪಗಳು ಕೇಳಿಬಂದಿತ್ತು. ಹಾಗಾಗಿ ಈ ಬಾರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಇಫ್ತಾರ್ ನಲ್ಲಿ ಭಾಗವಹಿಸುವ ಬಗ್ಗೆ ಮುಸ್ಲಿಂ ಮುಖಂಡರು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ,

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry