ಸಾಲಮನ್ನಾ ಮಾಡದಿದ್ದರೆ ರಾಜ್ಯ ಬಂದ್: ವಾಟಾಳ್ ಎಚ್ಚರಿಕೆ

7

ಸಾಲಮನ್ನಾ ಮಾಡದಿದ್ದರೆ ರಾಜ್ಯ ಬಂದ್: ವಾಟಾಳ್ ಎಚ್ಚರಿಕೆ

Published:
Updated:
ಸಾಲಮನ್ನಾ ಮಾಡದಿದ್ದರೆ ರಾಜ್ಯ ಬಂದ್: ವಾಟಾಳ್ ಎಚ್ಚರಿಕೆ

ಯಾದಗಿರಿ: ಹದಿನೈದು ದಿನಗಳಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಲ್ಲಿನ ರೈತರ ಸಾಲವನ್ನು ಮನ್ನಾ ಮಾಡದಿದ್ದರೆ ರಾಜ್ಯ ಬಂದ್ ಗೆ ಕರೆ ನೀಡಲಾಗುವುದು ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅವರು ಪ್ರಚಾರಕ್ಕಾಗಿ ಶುಕ್ರವಾರ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಹುಮತ ಇಲ್ಲ, ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂಬ ಸಬೂಬು ಹೇಳುವುದನ್ನು ಸಿಎಂ ಕುಮಾರಸ್ವಾಮಿ ಹೇಳಬಾರದು. ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ರೈತ ಸಂಘಟನೆ ಮತ್ತು ರಾಜ್ಯದ ಇತರೆ ಎಲ್ಲಾ ಸಂಘಟನೆಗಳ ಜತೆಗೆ ಕನ್ನಡ ಒಕ್ಕೂಟ ಮಾತುಕತೆ ನಡೆಸಿದೆ. ಇನ್ನು ಎರಡು ವಾರಗಳಲ್ಲಿ ಸಿಎಂ ಸಾಲಮನ್ನಾ ಕುರಿತು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು. ಮಾತು ತಪ್ಪಿದರೆ ಅಖಂಡ ಕರ್ನಾಟಕ ಬಂದ್ ನಡೆಸಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry