ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಮುಕ್ತ ಜಿಲ್ಲೆಗೆ ಕ್ರಿಯಾ ಯೋಜನೆ ಸಿದ್ಧ

ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಅಂಗವಾಗಿ ನಡೆದ ಪೂರ್ವ ಸಿದ್ಧತಾ ಸಭೆ
Last Updated 1 ಜೂನ್ 2018, 9:47 IST
ಅಕ್ಷರ ಗಾತ್ರ

ಧಾರವಾಡ: ‘ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವ ಸಲುವಾಗಿ ಕ್ರಿಯಾಯೋಜನೆ ರೂಪಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ  ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ಅರಣ್ಯ ಇಲಾಖೆ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೇತೃತ್ವದಲ್ಲಿ ವಿವಿಧ ಇಲಾಖೆ ಹಾಗೂ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆ, ಸಂಘಗಳ ಸಹಯೋಗದಲ್ಲಿ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಪರಿಸರಕ್ಕೆ ವಿಷಕಾರಿ ಆಗಿರುವ ಮತ್ತು ಜೀವಹಾನಿಗೆ ಕಾರಣವಾಗುತ್ತಿರುವ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ಜೂನ್ 5 ರಿಂದ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳ ನೇತೃತ್ವದಲ್ಲಿ ಅಂಗಡಿ, ಹೋಟೆಲ್ ಹಾಗೂ ಇತರ ವ್ಯಾಪಾರ ವಹಿವಾಟು ಕೇಂದ್ರಗಳ ಮೇಲೆ ದಾಳಿ ಮಾಡಿ, ದಂಡ ವಸೂಲಿ ಮತ್ತು ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಅವಳಿ ನಗರದಲ್ಲಿರುವ ಕಲ್ಯಾಣ ಮಂಟಪ, ಹೋಟೆಲ್, ವಸತಿಗೃಹ ಮತ್ತು ಸಮುದಾಯ ಭವನಗಳ ಮುಖ್ಯಸ್ಥರ ಸಭೆ ನಡೆಸಿ, ಆಯಾ ಕಟ್ಟಡ, ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿವಿಧ ಇಲಾಖೆಗಳ ಮುಖ್ಯಸ್ಥರು ಸುತ್ತೋಲೆ ಹೊರಡಿಸುವ ಮೂಲಕ ತಮ್ಮ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜು, ಕಚೇರಿಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಗೃಹ ಉಪಯೋಗಿ ವಸ್ತುಗಳು, ತರಕಾರಿ, ದಿನಸಿ ಖರೀದಿಸಲು ಸಂತೆ, ಮಾರುಕಟ್ಟೆಗೆ ಹೋಗುವಾಗ ಮನೆಯಿಂದಲೇ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗುವ ಮೂಲಕ ಅನಗತ್ಯವಾಗಿ ಬಳಸುವ ಪ್ಲಾಸ್ಟಿಕ್‌ ಅನ್ನು ನಿಯಂತ್ರಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಡಿಎಫ್‌ಒ ಡಿ.ಮಹೇಶಕುಮಾರ, ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್ ಆರ್., ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್.ಚಿಣ್ಣನ್ನವರ, ಎಡಿಸಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಜಯಮಾಧವ.ಪಿ., ತಹಶೀಲ್ದಾರ್‌ ಪ್ರಕಾಶ ಕುದರಿ, ಪರಿಸರ ಅಧಿಕಾರಿ ವಿಜಯಕುಮಾರ.ಟಿ.ಕೆ, ಶೋಭಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ರುದ್ರೇಶಪ್ಪ, ಡಿಎಚ್‌ಒ ಡಾ.ಆರ್.ಎಂ.ದೊಡ್ಡಮನಿ, ಪ್ರಕಾಶ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT