ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರ: ಬಿತ್ತನೆ ಕಾರ್ಯ ಚುರುಕು

Last Updated 1 ಜೂನ್ 2018, 13:01 IST
ಅಕ್ಷರ ಗಾತ್ರ

ಹೊಳೆನರಸೀಪುರ: ತಾಲ್ಲೂಕಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಾಗಿದೆ. ಜನವರಿಯಿಂದ ಮೇ ಅಂತ್ಯಕ್ಕೆ ವಾಡಿಕೆ ಮಳೆ 143 ಮಿ.ಮೀ ಇದ್ದರೆ, ಈ ವರ್ಷ ಇದುವರೆಗೂ 156 ಮಿ.ಮೀ ಆಗಿದೆ. ಮಳೆ ಹೆಚ್ಚಿರುವ ಕಾರಣ ರೈತರು ಪೂರ್ವ ಮುಂಗಾರಿನ ಬೆಳೆಗಳಾದ ಅಲಸಂದೆ, ಹೆಸರು, ಉದ್ದು ಬಿತ್ತನೆಗೆ ಚಾಲನೆ ನೀಡಿದ್ದಾರೆ. ಕೃಷಿ ಇಲಾಖೆ ಪ್ರಕಾರ, 1490 ಹೆಕ್ಟೇರ್‌ನಲ್ಲಿ ಈ ಬೆಳೆಗಳು ಬಿತ್ತನೆಯಾಗಿವೆ.

ನೀರಾವರಿ ಮತ್ತು ಮಳೆಯಾಶ್ರಿತ ಪ್ರದೇಶದಲ್ಲಿ 845 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನಜೋಳ, ನೆಲಗಡಲೆ ಮತ್ತು ಸೂರ್ಯಕಾಂತಿ, ಸುಮಾರು 500 ಹೆಕ್ಟೇರ್‌ನಲ್ಲಿ;  ಕಬ್ಬು 400 ಹೆಕ್ಟೇರ್‌ ಪ್ರದೇಶದಲ್ಲಿ, ಹೊಗೆಸೊಪ್ಪು 600 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ.

ತಾಲ್ಲೂಕಿನಲ್ಲಿ ಎಲ್ಲ ಬೆಳೆಗಳ ಒಟ್ಟು ಬಿತ್ತನೆ ಗುರಿ 27070 ಹೆಕ್ಟೇರ್. ಇದುವರೆವಿಗೆ 3835 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಆಗಿದ್ದು ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ.

ಒಂದು ವಾರದಿಂದ ಹೆಚ್ಚುವರಿ ಮಳೆಯಾಗಿದೆ. ರಾಗಿ, ಭತ್ತ ಮತ್ತು ಮುಸುಕಿನ ಜೋಳ ಬೆಳೆಗಳ ಬಿತ್ತನೆಗೆ ಭೂಮಿ ಹದಮಾಡಿಕೊಳ್ಳುವ ಸಿದ್ಧತೆಯಲ್ಲಿ ರೈತರು ಇದ್ದಾರೆ.

ತಾಲ್ಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ಲಘು ಪೋಷಕಾಂಶ ಅಲ್ಲದೆ, ಔಷಧಿ ಸಿಂಪಡಿಸುವ ಯಂತ್ರಗಳು ಬೇಡಿಕೆಗೆ ಪೂರಕವಾಗಿ ದಾಸ್ತಾನಿದೆ.

ಇವುಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಆರ್‌. ರಂಗನಾಥ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT