ಸಿಂದಿಯಾ ವಾಣಿಜ್ಯ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ

7

ಸಿಂದಿಯಾ ವಾಣಿಜ್ಯ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ

Published:
Updated:
ಸಿಂದಿಯಾ ವಾಣಿಜ್ಯ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ

ಮುಂಬೈ: ದಕ್ಷಿಣ ಮುಂಬೈನ ಬಂದರು ಪ್ರದೇಶಕ್ಕೆ ಸಮೀಪದಲ್ಲಿರುವ ಸಿಂದಿಯಾ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಸಂಜೆ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.

ಕಟ್ಟಡದಲ್ಲಿ ಸಿಲುಕಿದ್ದ ಐವರನ್ನು ರಕ್ಷಿಸಲಾಗಿದ್ದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿದುಬಂದಿದೆ.

ಆದಾಯ ತೆರಿಗೆ ಇಲಾಖೆಯ ಕಚೇರಿ ಇರುವ ಕಟ್ಟಡದ ಮೂರನೇ ಮಹಡಿಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ವರದಿಯಾಗಿಲ್ಲ.

ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದ್ದು, ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry