ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಸಿಐಗೆ ₹121 ಕೋಟಿ ದಂಡ

Last Updated 1 ಜೂನ್ 2018, 19:30 IST
ಅಕ್ಷರ ಗಾತ್ರ

ಮುಂಬೈ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು (ಫೆಮಾ) ಉಲ್ಲಂಘಿಸಿರುವ ಕಾರಣ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕೆಲ ಹಿರಿಯ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ₹121.56 ಕೋಟಿ ದಂಡ ವಿಧಿಸಿದೆ.

2009ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿ ದಕ್ಷಿಣ ಆಫ್ರಿಕಾದಲ್ಲಿ ಆಯೋಜನೆಯಾಗಿತ್ತು. ಪಂದ್ಯಗಳಿಗೆ ಆತಿಥ್ಯ ವಹಿಸಿದ್ದಕ್ಕಾಗಿ ಬಿಸಿಸಿಐ, ಕ್ರಿಕೆಟ್‌ ದಕ್ಷಿಣ ಆಫ್ರಿಕಾಕ್ಕೆ (ಸಿಎಸ್‌ಎ) ₹243 ಕೋಟಿ ನೀಡಲು ಒಪ್ಪಿತ್ತು. ಈ ಮೊತ್ತವನ್ನು ದಕ್ಷಿಣ ಆಫ್ರಿಕಾದಲ್ಲಿ ಪ್ರತ್ಯೇಕ ಖಾತೆ ತೆರೆಯದೆ ಸಿಎಸ್‌ಎಗೆ ವರ್ಗಾವಣೆ ಮಾಡಲಾಗಿತ್ತು.

ಹೀಗಾಗಿ ಬಿಸಿಸಿಐಗೆ ₹82.66 ಕೋಟಿ, 2009ರಲ್ಲಿ ಮಂಡಳಿಯ ಮುಖ್ಯಸ್ಥರಾಗಿದ್ದ ಎನ್‌.ಶ್ರೀನಿವಾಸನ್‌ಗೆ ₹11.53 ಕೋಟಿ, ಐಪಿಎಲ್‌ನ ಮುಖ್ಯಸ್ಥರಾಗಿದ್ದ ಲಲಿತ್‌ ಮೋದಿಗೆ ₹10.65 ಕೋಟಿ, ಬಿಸಿಸಿಐನ ಖಜಾಂಚಿಯಾಗಿದ್ದ ಎಂ.ಪಿ.ಪಾಂಡೋವ್‌ಗೆ ₹9.72 ಕೋಟಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಟ್ರಾವಂಕೂರ್‌ಗೆ ₹7 ಕೋಟಿ ಮತ್ತು ಬ್ಯಾಂಕ್‌ನ ವ್ಯವಸ್ಥಾಪಕರಿಗೆ ₹10 ಕೋಟಿ ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು 45 ದಿನಗಳ ಒಳಗೆ ಪಾವತಿಸಲು ಸೂಚಿಸಲಾಗಿದೆ.

ಜಾರಿ ನಿರ್ದೇಶನಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಇವರಿಗೆ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT