ದ್ವಿತೀಯ ಪಿಯು ಪೂರಕ ಪರೀಕ್ಷೆ 29ಕ್ಕೆ ಮುಂದೂಡಿಕೆ

7

ದ್ವಿತೀಯ ಪಿಯು ಪೂರಕ ಪರೀಕ್ಷೆ 29ಕ್ಕೆ ಮುಂದೂಡಿಕೆ

Published:
Updated:
ದ್ವಿತೀಯ ಪಿಯು ಪೂರಕ ಪರೀಕ್ಷೆ 29ಕ್ಕೆ ಮುಂದೂಡಿಕೆ

ಬೆಂಗಳೂರು: ವಿವಿಧ ಚುನಾವಣೆಗಳ ಪ್ರಯುಕ್ತ ಇದೇ 8ರಂದು ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು 29ಕ್ಕೆ ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಜೂನ್‌ 8ರಂದು ವಿಧಾನ ಪರಿಷತ್‌ ಚುನಾವಣೆ ಹಾಗೂ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದೆ. ಇದಾದ ನಂತರ 21ರಿಂದ 28ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಯಲಿದೆ.

ಹೀಗಾಗಿ ಈ ಹಿಂದೆ ನಿಗದಿಯಾಗಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ವಿವರವಾದ ವೇಳಪಟ್ಟಿ ಇಲಾಖೆಯ ವೆಬ್‌ಸೈಟ್‌ www.pue.kar.nic.in ನಲ್ಲಿ ಲಭ್ಯವಿದೆ.

ಶುಲ್ಕ ಕಟ್ಟುವ ದಿನಾಂಕ ವಿಸ್ತರಣೆ: ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಕಟ್ಟುವ ದಿನಾಂಕವನ್ನು ಇದೇ 6ರವರೆಗೆ ವಿಸ್ತರಿಸಲಾಗಿದೆ.

ಕಾಲೇಜಿನವರು ಸ್ವೀಕರಿಸಿದ ಶುಲ್ಕವನ್ನು 7ರಂದು ಇಲಾಖೆಗೆ ಸಂದಾಯ ಮಾಡಬೇಕು ಎಂದು ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry