ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ನಾಚಿಕೆಗೇಡಿನ ಕೆಲಸ– ಅಮಿತ್‌ ಶಾ

7

ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ನಾಚಿಕೆಗೇಡಿನ ಕೆಲಸ– ಅಮಿತ್‌ ಶಾ

Published:
Updated:
ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಇದು ನಾಚಿಕೆಗೇಡಿನ ಕೆಲಸ– ಅಮಿತ್‌ ಶಾ

ನವದೆಹಲಿ: ಬಿಜೆಪಿ ಕಾರ್ಯಕರ್ತ ದುಲಾಲ್‌ ಕುಮಾರ್‌ ಅವರ ಸಾವನ್ನು ಖಂಡಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಅಮಾನವೀಯ ವರ್ತನೆ ಹಾಗೂ ಹಿಂಸಾತ್ಮಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆದಿವೆ. ಇದು ನಾಚಿಕೆಗೇಡಿನ ಕೆಲಸ ಎಂದು ಕಿಡಿಕಾರಿದ್ದಾರೆ.

ಮೃತ ದುಲಾಲ್‌ ಕುಮಾರ್‌ ಅವರ ಸಾವಿಗೆ ಸಂತಾಪ ಸೂಚಿಸಿದ ಅಮಿತ್‌ ಶಾ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಇವರ ಸಾವಿಗೆ ಕಂಬನಿ ಮಿಡಿದಿದ್ದಾರೆ ಆ ದೇವರು ಮನೆಯವರಿಗೆ ಮಗನ ಸಾವನ್ನು ಎದುರಿಸುವ ಶಕ್ತಿ ನೀಡಲಿ. ಓಂ ಶಾಂತಿ..ಶಾಂತಿ..ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ದುಲಾಲ್ ಹಾಗೂ ತ್ರಿಲೋಚನ್ ಸಾವಿನ ನಡುವೆ ಕೊಂಚ ಸಾಮ್ಯತೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿಜಯ್‌ವರ್ಗಿಯಾ ಟ್ವೀಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್, ರಾಹುಲ್ ಸಿನ್ಹಾ ಸೇರಿದಂತೆ ಇನ್ನು ಹಲವು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ದುಲಾಲ್ ಸಾವಿನ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ವಹಿಸಬೇಕೆಂಬ ಒತ್ತಾಯವೂ ಕೇಳಿ ಬಂದಿದೆ.

ಪಶ್ಚಿಮ ಬಂಗಾಳದ ಬಲರಾಮ್‌ಪುರ ಜಿಲ್ಲೆ ಪುರುಲಿಯಾ ನಗರಕ್ಕೆ ಸಮೀಪದಲ್ಲಿರುವ ದಾಭಾ ಹಳ್ಳಿಯಲ್ಲಿ ಹೈ–ಟೆನ್ಷನ್‌ ವಿದ್ಯುತ್‌ ತಂತಿ ಹಾದುಹೋಗಿರುವ ಕಂಬದಲ್ಲಿ ಬಿಜೆಪಿ ಕಾರ್ಯಕರ್ತ ದುಲಾಲ್‌ ಕುಮಾರ್‌ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು

ಇದನ್ನೂ ಓದಿ...

ವಿದ್ಯುತ್‌ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಸಿಬಿಐ ತನಿಖೆಗೆ ಒತ್ತಾಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry