ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ

ಬೆಂಗಳೂರು: ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ಎಚ್.ಟಿ.ನರೇಂದ್ರ ಪ್ರಸಾದ್ ಹಾಗೂ ಪಿ.ಎಂ ನವಾಜ್ ಶನಿವಾರ ಅಧಿಕಾರ ಸ್ವೀಕರಿಸಿದರು.
ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಹಾಜರಿದ್ದರು.
ಪ್ರತಿಕ್ರಿಯಿಸಿ (+)