ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್-ಕಾಂಗ್ರೆಸ್ ಗೊಂದಲಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ: ಯಡಿಯೂರಪ್ಪ

Last Updated 3 ಜೂನ್ 2018, 9:21 IST
ಅಕ್ಷರ ಗಾತ್ರ

ತುಮಕೂರು: ಅಧಿಕಾರಕ್ಕಾಗಿ ಕೈ ಜೋಡಿಸಿದ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಆಡಳಿತ ಗೊಂದಲಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಅವರ ಪರ ಪ್ರಚಾರ ಸಭೆಯಲ್ಲಿ ಭಾನುವಾರ ಮಾತನಾಡಿದರು.

ಅವಕಾಶವಾದಿ ರಾಜಕಾರಣವನ್ನು ಜನರು ಒಪ್ಪುವುದಿಲ್ಲ ಎಂಬುದನ್ನು ಈ ಚುನಾವಣೆಯಲ್ಲಿ ಶಿಕ್ಷಕ ಮತದಾರರು ತೋರಿಸಿಕೊಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನವಕರ್ನಾಟಕ ನಿರ್ಮಾಣಕ್ಕೆ ಶಿಕ್ಷಕರು ಸಹಕಾರ ನೀಡಬೇಕು ಎಂದು ಹೇಳಿದರು.

5 ವರ್ಷ ಆಡಳಿತದಲ್ಲಿದ್ದ ಕಾಂಗ್ರೆಸ್ ಸರ್ಕಾರ ಶಿಕ್ಷಕರತ್ತ ತಿರುಗಿಯೂ ನೋಡಿರಲಿಲ್ಲ ಎಂದು ಟೀಕಿಸಿದರು.

‘ಜಾತಿ, ಮತ, ಕುಲ ನೋಡದೇ ನಾರಾಯಣಸ್ವಾಮಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು. ನಾರಾಯಣಸ್ವಾಮಿಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತೆ’ ಎಂದು ಹೇಳಿದರು.

ಜೂನ್ 8ರಿಂದ ಪ್ರವಾಸ: ರಾಜ್ಯದಲ್ಲಿ ಮಳೆಯಿಂದ ಕೆಲ ಕಡೆ ಅತಿವೃಷ್ಟಿಯಾಗಿದೆ. ಜೂನ್ 8ರ ನಂತರ ಅತಿವೃಷ್ಟಿ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತೇನೆ ಎಂದರು.

ಮೇಲ್ಮನೆಗೆ ಶಿಕ್ಷಕರ ಕ್ಷೇತ್ರ ಚುನಾವಣೆ ನಡೆಯುತ್ತಿರುವುದರಿಂದ ಸುಮ್ಮನಿದ್ದೇನೆ. ಚುನಾವಣೆ ಬಳಿಕ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT