7

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ: ಎಸ್‌.ಆರ್‌. ಪಾಟೀಲ್‌

Published:
Updated:
ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ: ಎಸ್‌.ಆರ್‌. ಪಾಟೀಲ್‌

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಉತ್ತರ ಕರ್ನಾಟಕದಲ್ಲಿ ನಿರೀಕ್ಷಿತ ಸ್ಥಾನ ಗೆಲ್ಲದಿರುವುದಕ್ಕೆ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಎಸ್‌.ಆರ್‌.ಪಾಟೀಲ್‌ ಅವರು ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಪಕ್ಷದ ನಾಯಕರ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಉತ್ತರ ಕನ್ನಡ ಭಾಗದಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ಬಹಳಷ್ಟು ನಂಬಿಕೆಯಿಂದ ನನಗೆ ಕಾಂಗ್ರೆಸ್ ಹೈಕಮಾಂಡ್ ಉತ್ತರ ಕರ್ನಾಟಕ ಜವಾಬ್ದಾರಿ ನೀಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ನಾವು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry