ಅರ್ಧಕ್ಕೆ ನಿಂತ ಇಂದಿರಾ ಕ್ಯಾಂಟಿನ್‌ ಕಟ್ಟಡ

7

ಅರ್ಧಕ್ಕೆ ನಿಂತ ಇಂದಿರಾ ಕ್ಯಾಂಟಿನ್‌ ಕಟ್ಟಡ

Published:
Updated:
ಅರ್ಧಕ್ಕೆ ನಿಂತ ಇಂದಿರಾ ಕ್ಯಾಂಟಿನ್‌ ಕಟ್ಟಡ

ಮಾಗಡಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯ ಹಿಂಭಾಗದಲ್ಲಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅಧಿಕಾರದ ಅವಧಿಯಲ್ಲಿ ಬಡಜನರ ಬಳಕೆಗಾಗಿ ಇಂದಿರಾ ಕ್ಯಾಂಟಿನ್‌ ನಿರ್ಮಿಸಲು ಕಾಮಗಾರಿ ಆರಂಭಿಸಿ ಅರ್ಧಕ್ಕೆ ನಿಲ್ಲಿಸಿರುವುದು ಸರಿಯಲ್ಲ ಎಂದು ತಿರುಮಲೆ ಕನ್ನಡ ಕೂಟದ ಸಂಚಾಲಕ ತಿರುಮಲೆ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬಡವರಿಗೆ ಕಡಿಮೆ ದರದಲ್ಲಿ ತಿಂಡಿ, ಕಾಪಿ, ಅನ್ನ ನೀಡುವ ಈ ಕ್ಯಾಂಟಿನ್‌ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು. ಬಡವರ ಪರವಾಗಿ ಕೆಲಸ ಮಾಡುವ ಸರ್ಕಾರದ ಮಹತ್ವದ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು. ಕ್ಯಾಂಟಿನ್‌ ಆರಂಭಿಸಿ ಹಸಿದ ಹೊಟ್ಟೆಗಳಿಗೆ ಅನ್ನನೀಡುವಂತೆ ಅವರು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry