ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತು ದಿನಗಳವರೆಗೆ ಮೆಟ್ರೊ ಮುಷ್ಕರ ಮುಂದೂಡಿಕೆ, ತ್ರಿಪಕ್ಷೀಯ ಮಾತುಕತೆಗೆ ಹೈಕೋರ್ಟ್ ಆದೇಶ

Last Updated 4 ಜೂನ್ 2018, 11:11 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ನೌಕರರ ಬೇಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾತುಕತೆಗೆ ಮುಂದಾಗುವಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಮುಂದಿನ ಹತ್ತು ದಿನಗಳಲ್ಲಿ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್ ಹಾಗೂ ಮೆಟ್ರೊ ನೌಕರರ ಸಂಘ ತ್ರಿಪಕ್ಷೀಯ ಮಾತುಕತೆ ನಡೆಸುವಂತೆ ತಿಳಿಸಿದೆ.

ಈ ಕುರಿತ ಪ್ರಕರಣವನ್ನು ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಸಂಬಂಧ ನೌಕರರು ಹಾಗೂ ಸಂಘದ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸುವಂತೆ ನ್ಯಾಯಪೀಠ ಆದೇಶಿಸಿದೆ.

‘ನೌಕರರ ಆರ್ಥಿಕ ಮತ್ತು ಆರ್ಥಿಕೇತರ ಸಮಸ್ಯೆಗಳನ್ನು ಆಲಿಸಿ. ಅವುಗಳನ್ನು ಪಟ್ಟಿ ಮಾಡಿಕೊಳ್ಳಿ‌. ಹಣಕಾಸು ತಜ್ಞರ ಜೊತೆ ಚರ್ಚಿಸಿ. ಯಾವ ರೀತಿ ಸಮಸ್ಯೆ ಬಗೆಹರಿಸಬಹುದು ಎಂಬುದರ ಬಗ್ಗೆ ಚಿಂತನ–ಮಂಥನ ನಡೆಸಿ. ನಂತರ ಮುಂದೇನು ಮಾಡಬಹುದೆಂದು ನೋಡೋಣ’ ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿದೆ.

‘ಈ ಮಧ್ಯೆ ನೌಕರರು ಮುಷ್ಕರಕ್ಕೆ ಮುಂದಾಗಬಾರದು. ಅಂತೆಯೇ ನೌಕರರ ವಿರುದ್ಧ ಬಿಎಂಆರ್‌ಸಿಎಲ್ ಕೂಡಾ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ತಾಕೀತು ಮಾಡಿದೆ.

ವಿಚಾರಣೆಯನ್ನು ಇದೇ ಜೂನ್‌ 19 ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT