ಜನರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ

7
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೀವ್ ಚಾವ್ಲಾ ಸೂಚನೆ

ಜನರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ

Published:
Updated:

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗುವ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೀವ್ ಚಾವ್ಲಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಶೇ 190ರಷ್ಟು ಹೆಚ್ಚು ಮಳೆಯಾಗಿದೆ. ಈವರೆಗೆ ಬೆಳೆ ಹಾನಿ ಒಳಗೊಂಡಂತೆ ಯಾವುದೇ ನಷ್ಟ ಸಂಭವಿಸಿಲ್ಲ. ರೈತರ ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ, ಮೇವು ದಾಸ್ತಾನು ಇದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಅವುಗಳನ್ನು ರೈತರು ಪಡೆಯಬಹುದು ಎಂದು ತಿಳಿಸಿದರು.

ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಶುದ್ಧ ಕುಡಿಯುವ ನೀರು, ವಿದ್ಯುತ್ ಪೂರೈಕೆ ಒಳಗೊಂಡಂತೆ ಮೂಲ ಸೌಕರ್ಯ ಗಳಿಗೆ ತೊಂದರೆಯಾಗದಂತೆ ನಿಗಾವಹಿ ಸಬೇಕು. ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಪರಿಹಾರ ನೀಡಬೇಕು ಎಂದು ಸಲಹೆ ನೀಡಿದರು.

ಉಪವಿಭಾಗಾಧಿಕಾರಿ ಬಿ.ಸರೋಜ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಂ.ಸಿ.ಸೀತಾ, ತೋಟಗಾರಿಕೆ ಇಲಾಖೆಯ

ಉಪ ನಿರ್ದೇಶಕಿ ಪೂರ್ಣಿಮಾ, ನಗರಸಭೆ ಆಯುಕ್ತೆ ಎಂ.ವಿ.ತುಷಾರಮಣಿ ಇದ್ದರು.

ಪ್ರತಿ ಶನಿವಾರ ಸಭೆ ನಡೆಸಿ: ಡಿ.ಸಿ

ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಮಾತನಾಡಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಪ್ರತಿ ಶನಿವಾರ ಸಭೆ ನಡೆಸಬೇಕು. ತಾಲ್ಲೂಕಿನ ಮಳೆ, ಕೃಷಿ, ನಷ್ಟದ ಪ್ರಮಾಣ ಪಟ್ಟಿ ಮಾಡಬೇಕು. ಅದನ್ನು ಪ್ರತಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸಬೇಕು ಎಂದರು.

ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಅನುಮತಿ ಇಲ್ಲದೆ ರಜೆ ಹಾಕಬಾರದು. ಕೇಂದ್ರ ಸ್ಥಾನದಿಂದ ಹೊರ ಹೋಗಬಾರದು ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry