ಮುಂಗಾರು ಮಳೆ: ಪ್ರಾಣ, ಆಸ್ತಿ ರಕ್ಷಣೆಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ

7

ಮುಂಗಾರು ಮಳೆ: ಪ್ರಾಣ, ಆಸ್ತಿ ರಕ್ಷಣೆಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ

Published:
Updated:
ಮುಂಗಾರು ಮಳೆ: ಪ್ರಾಣ, ಆಸ್ತಿ ರಕ್ಷಣೆಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಮುಂಗಾರು ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಯಾವುದೇ ತೊಂದರೆಯಾಗದಂತೆ ಗಮನವಹಿಸುವಂತೆ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೋಮವಾರ ಮಹಾನಗರ ಪಾಲಿಕೆಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ, 'ಮುಂಗಾರು ಮಳೆ ಆರಂಭವಾಗಿದೆ. ಬಿರುಸಿನ ಗಾಳಿ ಸಹಿತ ಬೀಳುತ್ತಿರುವ ಮಳೆ ಆತಂಕಕಾರಿಯಾಗದಂತೆ ನೋಡಿಕೊಳ್ಳಬೇಕಾದ ಅಗತ್ಯ ಇದೆ. ಜನರಿಗೆ ಪ್ರಾಣಾಪಾಯವಾಗದಂತೆ, ರಸ್ತೆಗಳಲ್ಲಿ ಗುಂಡಿ ಬೀಳದಂತೆ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಗಮನಹರಿಸಿ’ ಎಂದರು.

ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥವಾಗಬಾರದು. ಕಾಲುವೆ, ಮೋರಿಗಳಲ್ಲಿ ನೀರು ನಿಲ್ಲದಂತೆ, ಜೀವಗಳು ಕೊಚ್ಚಿಹೋಗದಂತೆ ನಿಗಾವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಹಾನಗರಪಾಲಿಕೆಯ ಅಧಿಕಾರಿಗಳು ಮಾತನಾಡಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕೆಲಸ ಈಗಾಗಲೇ ಕೈಗೊಂಡಿದ್ದು, ಮಳೆ ಬಿರುಸಾಗುವುದಕ್ಕೆ ಮುನ್ನ ಎಲ್ಲಾ ಗುಂಡಿಗಳನ್ನು ಮುಚ್ಚುವ ವಿಶ್ವಾಸ ವ್ಯಕ್ತಪಡಿಸಿದರು.

ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರು ವ್ಯಕ್ತಪಡಿಸುತ್ತಿರುವ ಆತಂಕವನ್ನು ಪ್ರಸ್ತಾಪಿಸಿದ ಸಿಎಂ, ಇಂದಿಗೂ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ. ಸ್ವಚ್ಛತೆ ಕಾಪಾಡುವುದು ಸರ್ಕಾರದ ಕರ್ತವ್ಯ. ಆದಷ್ಟೂ ಬೇಗ ಪರಿಸ್ಥಿತಿಯನ್ನು ಉತ್ತಮಪಡಿಸುವಂತೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry