ರಾಜ್ಯದಲ್ಲಿ ಭಾರಿ ಮಳೆ ನಿರೀಕ್ಷೆ

3
ಕರಾವಳಿ, ಮಲೆನಾಡಿನ ಭಾಗಗಳಲ್ಲಿ ಅಧಿಕ ಮಳೆ

ರಾಜ್ಯದಲ್ಲಿ ಭಾರಿ ಮಳೆ ನಿರೀಕ್ಷೆ

Published:
Updated:
ರಾಜ್ಯದಲ್ಲಿ ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದ ಪಶ್ಚಿಮ ಭಾಗಗಳಲ್ಲಿ ಜೂನ್‌ 6 ರಿಂದ 10ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.

‘ಕರಾವಳಿ, ಮಲೆನಾಡಿಗೆ ಹೊಂದಿಕೊಂಡ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. 2ರಿಂದ 10ಸೆಂ.ಮೀ ಮಳೆ ಸುರಿಯುವ ನಿರೀಕ್ಷೆ ಇದೆ. ಗುಡುಗು, ಮಿಂಚಿನ ಆರ್ಭಟ ಕಡಿಮೆಯಾಗಲಿದೆ. ಆದರೆ ಸತತವಾಗಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ’ ಎಂದರು.

‘ಮೇ 30ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಿದೆ. ರಾಜ್ಯದ ಅರ್ಧಭಾಗಕ್ಕೆ ಅಂದರೆ ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿವರೆಗೂ ಮುಂಗಾರು ವ್ಯಾಪಿಸಿದೆ’ ಎಂದು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry