ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾದಾಮಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ

Last Updated 4 ಜೂನ್ 2018, 19:39 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇದೇ 7ರಿಂದ ನಾಲ್ಕು ದಿವಸ ಬಾದಾಮಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಹಾಗೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಸೋಲು ಕಂಡಿದ್ದರು.

ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಅರ್ಪಿಸಲು ಇದೇ 7ರಿಂದ ಪ್ರವಾಸ ಆರಂಭಿಸಲಿದ್ದಾರೆ. ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬಾದಾಮಿ ನಗರ, ಗುಳೇದ ಗುಡ್ಡ ಹಾಗೂ ಕೆರೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿರುವ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕುಳಗೇರಿ, ಸೋಮನಕೊಪ್ಪ, ನೀರಲಕೇರಿ, ಹಾಲಿಗೇರಿ, ಮಮಟಗೇರಿ, ಮುಷ್ಠಿಗೇರಿ ಸೇರಿದಂತೆ 39 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವಾಸ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT