ಜೂನ್‌ 7ರಿಂದ ಬಸ್‌ ಪಾಸ್‌ ವಿತರಣೆ

7

ಜೂನ್‌ 7ರಿಂದ ಬಸ್‌ ಪಾಸ್‌ ವಿತರಣೆ

Published:
Updated:

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು 1 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇದೇ 7ರಿಂದ ಪಾಸುಗಳನ್ನು ವಿತರಣೆ ಮಾಡಲಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಾಸ್ ವಿತರಿಸಲಾಗುತ್ತದೆ.

ಪಾಸ್‌ ಪಡೆದವರು ಸಂಸ್ಕರಣಾ ಶುಲ್ಕ ಮತ್ತು ಅಪಘಾತ ಪರಿಹಾರ ನಿಧಿ ₹150 ಪಾವತಿಸಬೇಕು. ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಜೊತೆಗೆ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು.

ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿ ಹಾಗೂ ಸಂಸ್ಥೆ ವೆಬ್‍ಸೈಟ್‍ www.ksrtc.in ನಲ್ಲಿ ಪಾಸ್ ಅರ್ಜಿಗಳು ಲಭ್ಯವಿರುತ್ತವೆ. ಭರ್ತಿ ಮಾಡಿದ ಅರ್ಜಿಗಳನ್ನು ಶಾಲೆಗಳು ದೃಢೀಕರಿಸಬೇಕು. ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ಶಾಲೆಗಳ ಮೂಲಕ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು ಎಂದು ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry