ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ವಿರುದ್ಧ ತನಿಖೆ ನಡೆದರೆ ಮೃತನ ಕುಟುಂಬಕ್ಕೆ ನ್ಯಾಯ: ಶೋಭಾ ಕರಂದ್ಲಾಜೆ

Last Updated 5 ಜೂನ್ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದ ದನದ ವ್ಯಾಪಾರಿ ಹುಸೇನಬ್ಬ ಸಾವಿನ ಪ್ರಕರಣದಲ್ಲಿ ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರನ್ನು ಗುರಿ ಮಾಡಲಾಗುತ್ತಿದೆ. ಪೊಲೀಸರ ವಿರುದ್ಧ ಸರಿಯಾದ ತನಿಖೆ ನಡೆದರೆ ಮಾತ್ರ ಮೃತನ ಕುಟುಂಬಕ್ಕೆ ನ್ಯಾಯ ದೊರಕುತ್ತದೆ ಎಂದು ಸಂಸದೆ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಹೇಳಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಸೇನಬ್ಬ ಮೇಲೆ ನಮ್ಮ ಕಾರ್ಯಕರ್ತರು ದಾಳಿ ಮಾಡಿಲ್ಲ. ಹಲ್ಲೆಯನ್ನೂ ನಡೆಸಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದರು. ಹುಸೇನಬ್ಬ ಪೊಲೀಸ್ ವಾಹನದಲ್ಲಿ ಕುಳಿತು 15ರಿಂದ 20 ನಿಮಿಷಗಳ ಪ್ರಯಾಣದ ಬಳಿಕ ಮೃತಪಟ್ಟಿದ್ದಾನೆ’ ಎಂದು ಹೇಳಿದರು.

ಜೆಡಿಎಸ್‌– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಕುಮ್ಮಕ್ಕಿನಿಂದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಪೊಲೀಸ್ ವಾಹನ ಏರಿದ ಬಳಿಕವೇ ಸಾವು ಸಂಭವಿಸಿದೆ ಎಂಬುದನ್ನು ಉಡುಪಿ ಎಸ್‌ಪಿ ತಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿಲ್ಲ ಎಂಬುದನ್ನೂ ಒಪ್ಪಿಕೊಳ್ಳುತ್ತಾರೆ. ಪೊಲಿಸರೇ ಸಾವಿಗೆ ನೇರ ಕಾರಣ. ಅವರ ವಿರುದ್ಧವೇ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ರಫೀಕ್‌ ಎಂಬ ಸಬ್‌ ಇನ್‌ಸ್ಪೆಕ್ಟರ್ ಪೆರ್ಡೂರು ಠಾಣೆಯಲ್ಲಿದ್ದರು. ಅವರು ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು. ಈಗ ಮತ್ತೆ ಅದೇ ಅಧಿಕಾರಿಯನ್ನು ಪೆರ್ಡೂರು ಠಾಣೆಗೆ ನಿಯೋಜಿಸಲಾಗಿದೆ. ತಕ್ಷಣವೇ ಈ ನಿಯೋಜನೆಯನ್ನು ಹಿಂದಕ್ಕೆ ಪಡೆಯಬೇಕು. ಜೆಡಿಎಸ್‌– ಕಾಂಗ್ರೆಸ್‌ ಸರ್ಕಾರದ ದ್ವೇಷ ಭಾವನೆ ವಿರುದ್ಧ ಬುಧವಾರ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT