ಸಿಸಿಬಿ ದಾಳಿ: ಗಾಂಜಾ ಜಪ್ತಿ

7

ಸಿಸಿಬಿ ದಾಳಿ: ಗಾಂಜಾ ಜಪ್ತಿ

Published:
Updated:

ಬೆಂಗಳೂರು: ಮಲ್ಲೇಶ್ವರದ 18ನೇ ಅಡ್ಡರಸ್ತೆಯಲ್ಲಿರುವ ಕಟ್ಟಡದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ₹75 ಸಾವಿರ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಸ್ಥಳೀಯ ನಿವಾಸಿಗಳಾದ ವಿ. ಚಂದನ್, ಕೆ.ಮನೋಜ್‌ಕುಮಾರ್, ಎಂ.ಸಂತೋಷ್ ಹಾಗೂ ಸಿ.ಜಿ.ಕುನಾಲ್ ಎಂಬುವರನ್ನು ಪ‍್ರಕರಣ ಸಂಬಂಧ ಬಂಧಿಸಲಾಗಿದೆ.

‘ಮುಕ್ತ’ ಹೆಸರಿನ ಕಟ್ಟಡದ ಕೊಠಡಿಯಲ್ಲಿದ್ದ ಅವರು, ಗಾಂಜಾವನ್ನು ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದರು. ಆ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಲಾಯಿತು ಎಂದು ಪೊಲೀಸರು ಹೇಳಿದರು.

‘ಗಾಂಜಾವನ್ನು ಸಣ್ಣ ಪೊಟ್ಟಣಗಳಲ್ಲಿ ಹಾಕಿ, ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ಕೆಲವರು ಕೊಠಡಿಗೆ ಬಂದು ಗಾಂಜಾ ತೆಗೆದುಕೊಂಡು ಹೋಗುತ್ತಿದ್ದರು. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳಿರುವ ಮಾಹಿತಿ ಇದ್ದು, ಪತ್ತೆ ಹಚ್ಚುತ್ತಿದ್ದೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry