6

ಕಾಂಗ್ರೆಸ್‌ನ 15, ಜೆಡಿಎಸ್‌ನ 10 ಸಚಿವರಿಂದ ಪ್ರಮಾಣವಚನ ಸ್ವೀಕಾರ

Published:
Updated:
ಕಾಂಗ್ರೆಸ್‌ನ 15, ಜೆಡಿಎಸ್‌ನ 10 ಸಚಿವರಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು:  ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯ ಪ್ರಮಾಣ ವಚನ ಸಮಾರಂಭ ರಾಜಭವನದ ಗಾಜಿನಮನೆಯಲ್ಲಿ ಸರಳವಾಗಿ ನೆರವೇರಿತು.

ಕಾಂಗ್ರೆಸ್ ಪಕ್ಷದ 15 ಶಾಸಕರು ಮತ್ತು ಜೆಡಿಎಸ್‌ ಪಕ್ಷದ 10 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ ಸಮಾರಂಭದಲ್ಲಿ ಹಾಜರಿದ್ದರು. ಬಿಎಸ್‌ಪಿಯ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸತೀಶಚಂದ್ರ ಮಿಶ್ರಾ ಹಾಜರಿದ್ದರು.

ನೂತನ ಸಚಿವರ ಬೆಂಬಲಿಗರು ಮತ್ತು ಜೆಡಿಎಸ್‌, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು. 

ಜೆಡಿಎಸ್ ಪಕ್ಷದಿಂದ ಸಚಿವರಾಗಿ– ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪುರ, ಜಿ.ಟಿ.ದೇವೇಗೌಡ, ಮನಗೂಳಿ, ಗುಬ್ಬಿ ಶ್ರೀನಿವಾಸ್, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಎನ್.ಮಹೇಶ್, ಡಿ.ಸಿ. ತಮ್ಮಣ್ಣ

ಕಾಂಗ್ರೆಸ್ ಪಕ್ಷದ ಸಚಿವರು: ಆರ್ .ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಶಿವಶಂಕರ ರೆಡ್ಡಿ, ರಮೇಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಜಮೀರ್ ಅಹ್ಮದ್ , ಶಿವಾನಂದ ಪಾಟೀಲ್ , ವೆಂಕಟರಮಣಪ್ಪ, ರಾಜಶೇಖರ್ ಪಾಟೀಲ್, ಪುಟ್ಟರಂಗಶೆಟ್ಟಿ, ಶಂಕರ್, ಜಯಮಾಲ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry