ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ– ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಸಿ: ಅಖಿಲೇಶ್‌ ಯಾದವ್‌

Last Updated 6 ಜೂನ್ 2018, 19:30 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು 2019ರಲ್ಲಿ ಏಕಕಾಲಕ್ಕೆ ನಡೆಸಿ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ನಾಯಕ ಅಖಿಲೇಶ್‌ ಯಾದವ್‌ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ‘ಮತದಾರರ ಪಟ್ಟಿಯನ್ನು ಆಧಾರ್‌ ಸಂಖ್ಯೆ ಜೊತೆ ಜೋಡಿಸಿದರೂ ನಮ್ಮ ವಿರೋಧವಿಲ್ಲ.

‘ಒಂದು ದೇಶ ಒಂದು ಚುನಾವಣೆ’ಗೆ ನಾವು ಸಿದ್ಧರಿದ್ದೇವೆ. ಇದನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು’ ಎಂದು ಬುಧವಾರ ಪತ್ರಿಕಾ
ಗೋಷ್ಠಿಯಲ್ಲಿ ಹೇಳಿದ್ದಾರೆ.

ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು ‘ಚುನಾವಣೆಯಲ್ಲಿ ಬಿಜೆಪಿಯವರು ಗೆಲುವಿನ ಸೂತ್ರ ಅಳವಡಿಸಿಕೊಂಡರೆ ನಾವು ಕೂಡ ಅದಕ್ಕೆ ಪ್ರತಿಯಾಗಿ ನಮ್ಮದೇ ಸೂತ್ರ‌ ಅಳವಡಿಸಿಕೊಳ್ಳುತ್ತೇವೆ’ ಎಂದಿದ್ದಾರೆ.

‘ಯಾರು ಯಾರ ವಿರುದ್ಧಸ್ಪರ್ಧಿಸುತ್ತಾರೆ, ಎಷ್ಟು ಪಕ್ಷಗಳು ಜೊತೆಯಾಗಿವೆ ಎಂಬುದು ಮುಖ್ಯವಲ್ಲ. ಇದು ಇಡೀ ದೇಶಕ್ಕೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಮೈತ್ರಿಯನ್ನು ಹೇಗೆ ಮುಂದೆ ಕೊಂಡೊಯ್ಯುವುದು ಎನ್ನುವುದು ಮುಖ್ಯ’ ಎಂದು ಅಖಿಲೇಶ್‌ ಹೇಳಿದ್ದಾರೆ.

ಮಧ್ಯಪ್ರದೇಶ, ಛತ್ತೀಸ್‌ಗಡ ಮತ್ತು ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳಲ್ಲಿ ಎಸ್‌ಪಿ ಸ್ಪರ್ಧಿಸಲಿದೆ ಎಂದಿರುವ ಅವರು, ‘ಮೈತ್ರಿ ಚೆನ್ನಾಗಿ ಕಾರ್ಯ ನಿರ್ವಹಿಸಿದರೆ ಉತ್ತಮ. ಇಲ್ಲದಿದ್ದರೆ ನಮ್ಮ ‘ಸೈಕಲ್‌‘ ಈ ರಾಜ್ಯಗಳಲ್ಲಿ ಸಂಚರಿಸಲಿದೆ’ ಎಂದಿದ್ದಾರೆ.

‘ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ವಿಫಲಗೊಂಡಿವೆ’ ಎಂದೂ ಅವರು ಹೇಳಿದ್ದಾರೆ.

ಗೋರಖ್‌ಪುರ, ಫೂಲ್ಪುರ ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ಈಚೆಗೆ ನಡೆದ ಕೈರಾನಾ ಮತ್ತು ಫೂಲ್ಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲು ಅನುಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT