ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಿಗರ ಸಹಕಾರ ಕೋರಿದ ರಜನಿಕಾಂತ್‌

Last Updated 6 ಜೂನ್ 2018, 19:30 IST
ಅಕ್ಷರ ಗಾತ್ರ

ಚೆನ್ನೈ: ಕರ್ನಾಟಕದಲ್ಲಿ ‘ಕಾಲಾ’ ಚಲನಚಿತ್ರವು ಸುಗಮವಾಗಿ ಬಿಡುಗಡೆಯಾಗಲು ಕನ್ನಡಿಗರು ಸಹಕರಿಸಬೇಕು ಎಂದು ನಟ ರಜನಿಕಾಂತ್‌ ಕೋರಿದ್ದಾರೆ.

‘ನಾನು ಯಾವುದೇ ತಪ್ಪು ಮಾಡಿಲ್ಲ. ಸಿನೆಮಾ ನೋಡಬಯಸುವವರಿಗೆ ಯಾವುದೇ ತೊಂದರೆ ಮಾಡಬೇಡಿ. ಎಲ್ಲರೂ ಸಹಕಾರ ನೀಡಬೇಕು’ ಎಂದು ರಜನಿಕಾಂತ್‌ ಕನ್ನಡದಲ್ಲಿಯೇ ಮನವಿ ಮಾಡಿದ್ದಾರೆ.

‘ಕಾವೇರಿ ನಿರ್ವಹಣಾ ಮಂಡಳಿ ರಚನೆಯು ಸುಪ್ರೀಂ ಕೋರ್ಟ್‌ ನಿರ್ಧಾರ ಆಗಿದೆ. ಈ ಕುರಿತು ನಾನು ಪ್ರಸ್ತಾಪಿಸಿದ್ದರಲ್ಲಿ ತಪ್ಪೇನಿಲ್ಲ’ ಎಂದಿದ್ದಾರೆ.

‘ಕಾವೇರಿ ನಿರ್ವಹಣಾ ಮಂಡಳಿ ರಚನೆಯು ಸುಪ್ರೀಂ ಕೋರ್ಟ್‌ ನಿರ್ಧಾರ ಆಗಿದೆ. ಈ ಕುರಿತು ನಾನು ಪ್ರಸ್ತಾಪಿಸಿದ್ದರಲ್ಲಿ ತಪ್ಪೇನಿಲ್ಲ’ ಎಂದು ರಜನಿಕಾಂತ್‌ ಹೇಳಿದ್ದಾರೆ.

ತಡೆಗೆ ‘ಸುಪ್ರೀಂ’ ನಕಾರ: ‘ಕಾಲಾ’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಅನುಮತಿ ಇಲ್ಲದೇ ತಮ್ಮ
ಕೃತಿ ಆಧರಿಸಿದ ಕಥೆ, ದೃಶ್ಯ ಹಾಗೂ ಹಾಡುಗಳನ್ನು ನಿರ್ಮಾಪಕರು ಬಳಸಿಕೊಂಡಿದ್ದಾರೆ. ಅದಕ್ಕಾಗಿ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಕೆ.ರಾಜಶೇಖರನ್ ಎಂಬವರು ಮನವಿ ಸಲ್ಲಿಸಿದ್ದರು.

ಹೈಕೋರ್ಟ್‌ ನಿರ್ದೇಶನ ಪಾಲನೆ: ಸಿ.ಎಂ.

ಬೆಂಗಳೂರು: ‘ಕಾಲಾ’ ಚಲನಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನಿರ್ದೇಶನವನ್ನು ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

‘ಚಲನಚಿತ್ರ ಬಿಡುಗಡೆಗೆ ಅವಕಾಶ ನೀಡಬೇಕು ಎಂದು ಚಿತ್ರ ವಿತರಕರು ಮನವಿ ಮಾಡಿದ್ದಾರೆ. ಆದರೆ, ಇಂತಹ ವಾತಾವರಣದಲ್ಲಿ ಚಿತ್ರ ಬಿಡುಗಡೆ ಸರಿಯಲ್ಲ ಎಂದು ಅವರಿಗೆ ತಿಳಿಸಿದ್ದೇನೆ’ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ಹಲವು ಸಂಘಟನೆಗಳು ನನ್ನನ್ನು ಭೇಟಿ ಮಾಡಿ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದೆಂದು ಮನವಿ ಮಾಡಿವೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT