ಹೈ–ಕ ಸಮಗ್ರ ಅಭಿವೃದ್ಧಿಗೆ ಹೋರಾಟ

5

ಹೈ–ಕ ಸಮಗ್ರ ಅಭಿವೃದ್ಧಿಗೆ ಹೋರಾಟ

Published:
Updated:

ಬೀದರ್: ‘ಜೂನ್ 8 ರಂದು ನಡೆಯಲಿರುವ ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಹೈದರಾಬಾದ್‌ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ವಿಧಾನ ಪರಿಷತ್ತಿನಲ್ಲಿ ನಿರಂತರ ಹೋರಾಟ ನಡೆಸುತ್ತೇನೆ’ ಎಂದು ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಡಾ. ರಾಹುಲ ಬಿ. ತಮ್ಮಣ್ಣ ಅವರು ತಿಳಿಸಿದರು.

ಈಶಾನ್ಯ ಪದವೀಧರರ ಮತ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಎಸ್‌ಪಿ ಯಾವುದೇ ರೀತಿಯ ಮೈತ್ರಿ ಮಾಡಿಕೊಂಡಿಲ್ಲ ಎಂದು ಈಚೆಗೆ ಮಾಧ್ಯಮಗೋಷ್ಠಿಯಲ್ಲಿ ಅವರು ತಿಳಿಸಿದರು.

ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ವೈಜನಾಥ ಸೂರ್ಯವಂಶಿ, ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ನಾಟಿಕರ್, ಪ್ರಧಾನ ಕಾರ್ಯದರ್ಶಿ ಸಚಿನ್‌ ಗಿರಿ, ಪ್ರಮುಖರಾದ ಸುರೇಶ ಜೋಜನಾಕರ್, ಡಾ. ದಿಲೀಪಕುಮಾರ ನವಲೆ, ಡಾ. ಪೀರಪ್ಪ ಸಜ್ಜನ್‌, ಮಹಮ್ಮದ್‌ ಜಾಫರ್, ಶಕ್ತಿಕಾಂತ ಭಾವಿದೊಡ್ಡಿ ಅವರು ಈ ಸಂದರ್ಭದಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry