ಸೋಮವಾರ, ಡಿಸೆಂಬರ್ 9, 2019
22 °C

ಕೆಪಿಸಿಸಿ ಕಚೇರಿ ಮುಂದೆ ಧರಣಿ ನಡೆಸಲು ಬೆಂಗಳೂರಿನತ್ತ ಹೊರಟ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬೆಂಬಲಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಪಿಸಿಸಿ ಕಚೇರಿ ಮುಂದೆ ಧರಣಿ ನಡೆಸಲು ಬೆಂಗಳೂರಿನತ್ತ ಹೊರಟ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬೆಂಬಲಿಗರು

ಚಿತ್ರದುರ್ಗ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕೆಪಿಸಿಸಿ ಕಚೇರಿ ಎದುರು ಧರಣಿ ನಡೆಸಲು ಶಾಸಕರ ಬೆಂಬಲಿಗರು ಗುರುವಾರ ಬೆಳಿಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾಯಿತಿ ಜನಪ್ರತಿನಿಧಿಗಳು ಇದರಲ್ಲಿ ಇದ್ದಾರೆ. ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪರುಶರಾಂಪುರ, ಹೊಟ್ಟೆಪ್ಪನಹಳ್ಳಿ ಗೊಲ್ಲರಹಟ್ಟಿ, ತುರುವನೂರು, ದೊಡ್ಡೇರಿ, ಜಾಜೂರು, ಮೇಗಳಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಂದ ಸುಮಾರು ಒಂದು ಸಾವಿರ ಜನರು ತೆರಳಿದ್ದಾರೆ. ಹತ್ತಾರು ಬಸ್‌ ಹಾಗೂ ಕಾರುಗಳಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಚಳ್ಳಕೆರೆಯಲ್ಲಿ ಮಾತ್ರ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಪುನರಾಯ್ಕೆಯಾಗಿರುವ ರಘುಮೂರ್ತಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಜಿಲ್ಲೆಯ ಕಾಂಗ್ರೆಸ್‌ ಮುಖಂಡರಲ್ಲಿತ್ತು.

ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡದ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರವನ್ನು ವಿರೋಧಿಸಿ ವಂದೇ ಮಾತರಂ ಜಾಗೃತಿ ವೇದಿಕೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಅಣಕು ಸಮಾಧಿ ಪ್ರತಿಭಟನೆ ನಡೆಸಿದರು.

ಪ್ರತಿಕ್ರಿಯಿಸಿ (+)