ಸೋಮವಾರ, ಡಿಸೆಂಬರ್ 9, 2019
24 °C

ಸಂಚಾರ ತಡೆದು ಬೆಂಬಲಿಗರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದ ವೇಳೆಯಲ್ಲೇ, ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರು ನಗರದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. 

ಬಸವೇಶ್ವರ ವೃತ್ತದಲ್ಲಿ (ಚಾಲುಕ್ಯ ವೃತ್ತ) ಮಧ್ಯಾಹ್ನ ಸೇರಿದ್ದ ಶಾಸಕ ಎಚ್‌.ಕೆ.ಪಾಟೀಲ ಅವರ ಬೆಂಬಲಿಗರು, ‘ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರ ಸದಾಶಿವನಗರದ ಮನೆ ಎದುರು ಸೇರಿದ್ದ ಬೆಂಬಲಿಗರು, ಸಚಿವ ಸ್ಥಾನಕ್ಕಾಗಿ ಪ್ರತಿಭಟನೆ ನಡೆಸಿದರು. ‘ಧಾರವಾಡ ಜಿಲ್ಲೆಯ ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿ ಅವರ ಬೆಂಬಲಿಗರು ವಿಧಾನಸೌಧ ಬಳಿ ಪ್ರತಿಭಟನೆ ನಡೆಸಿದರು. ವಿಧಾನಸೌಧದೊಳಗೆ ಹೋಗುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿದರು.‌

ಪ್ರತಿಕ್ರಿಯಿಸಿ (+)