ಬೆಳಗಾವಿ: ಎಚ್‌.ಕೆ. ಪಾಟೀಲ, ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗ್ರಹ

3

ಬೆಳಗಾವಿ: ಎಚ್‌.ಕೆ. ಪಾಟೀಲ, ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗ್ರಹ

Published:
Updated:
ಬೆಳಗಾವಿ: ಎಚ್‌.ಕೆ. ಪಾಟೀಲ, ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಳಗಾವಿ: ರೆಡ್ಡಿ ಸಮಾಜದ ಹಿರಿಯ ಮುಖಂಡರಾದ ರಾಮಲಿಂಗಾರೆಡ್ಡಿ ಹಾಗೂ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಇಲ್ಲಿನ ‘ರೆಡ್ಡಿ ಸಂಘ’ದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಸಮಾಜದ ಹಿರಿಯರು ಮತ್ತು ಅನುಭವಿ ಶಾಸಕನ್ನು ನಿರ್ಲಕ್ಷಿಸಿರುವುದು ಖಂಡನೀಯ. ಈ ಇಬ್ಬರೂ ನಾಯಕರು ಹೋದ ಸರ್ಕಾರದಲ್ಲಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಜನಪರ ಯೋಜನೆಗಳನ್ನು ನೀಡಿದ್ದಾರೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ಬಹಳ ಕೆಲಸ ಮಾಡಿದ್ದಾರೆ. ಅವರನ್ನು ಕಾಂಗ್ರೆಸ್‌ ಪಕ್ಷ ಗೌರವದಿಂದ ನಡೆಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ನಮ್ಮದು ದೊಡ್ಡ ಸಮಾಜವಾಗಿದೆ. ಕಡೆಗಣಿಸಿದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಅಧ್ಯಕ್ಷ ರಾಮಣ್ಣ ಮುಳ್ಳೂರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry