4

ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ಗೌರವ ಸಲ್ಲಿಸಲು ಬಂದೆ: ಪ್ರಣವ್‌ ಮುಖರ್ಜಿ

Published:
Updated:
ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ಗೌರವ ಸಲ್ಲಿಸಲು ಬಂದೆ: ಪ್ರಣವ್‌ ಮುಖರ್ಜಿ

ನಾಗಪುರ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಗುರುವಾರ ಭಾಗಿಯಾಗಿದರು.

ಆರ್‌ಎಸ್‌ಎಸ್ ಸಂಸ್ಥಾಪಕರಾದ ಕೇಶವ್ ಬಲಿರಾಂ ಹೆಡಗೆವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿದ ಅವರು, ‘ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ನನ್ನ ಗೌರವ ಸಮರ್ಪಿಸಲು ಇಂದು ಇಲ್ಲಿಗೆ ಬಂದಿದ್ದೇನೆ’ ಎಂದು ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.

(ಆರ್‌ಎಸ್‌ಎಸ್‌ ಮುಖ್ಯಕಚೇರಿಯಲ್ಲಿ ಆರ್‌ಎಸ್‌ಎಸ್ ವರಿಷ್ಠ ಮೋಹನ್ ಭಾಗವತ್ ಜತೆಗೆ ಪ್ರಣಬ್‌ ಮುಖರ್ಜಿ)

ಸುಮಾರು 50 ವರ್ಷಗಳಿಂದ ಸಂಘ ಪರಿವಾರದ ಸಿದ್ಧಾಂತ ವಿರೋಧಿಸುತ್ತಿದ್ದ ಪ್ರಣವ್‌ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರ್ಧಾರದ ಕುರಿತು ಬುಧವಾರದಿಂದಲೇ ದೇಶದಾದ್ಯಂತ ಪರ–ವಿರೋಧ ಚರ್ಚೆ ಆರಂಭವಾಗಿತ್ತು.

ಕಾಂಗ್ರೆಸ್‌ನ ವರಿಷ್ಠ ನಾಯಕರು ಮತ್ತು ಪುತ್ರಿಯ ಟೀಕೆಯ ನಡುವೆಯೂ ಆರ್‌ಎಸ್‌ಎಸ್‌ನ ತೃತೀಯ ವರ್ಷ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿರುವ ಕ್ರಮವನ್ನು ಆರ್‌ಎಸ್‌ಎಸ್‌ ಬಲವಾಗಿ ಸಮರ್ಥಿಸಿಕೊಂಡಿದೆ. ಮಹಾತ್ಮಾ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣ್ ಸಹ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಮ್ಮ ಕೆಲಸ ಮೆಚ್ಚಿ ನೆಹರು ಅವರು 1963ರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಪಾಲ್ಗೊಳ್ಳಲು ಅವಕಾಶ ಕೊಟ್ಟಿದ್ದರು ಎಂದು ಹೇಳಿಕೊಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry