ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ

7

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ

Published:
Updated:
ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ

ನಾಗಪುರ: ಆರ್‌ಎಸ್‌ಎಸ್‌ನ ತೃತೀಯ ವರ್ಷ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಗಿಯಾಗಿದ್ದಾರೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪ್ರಣವ್‌ ಮುಖರ್ಜಿ ಆರ್‌ಎಸ್‌ಎಸ್ ಸಂಸ್ಥಾಪಕರಾದ ಕೇಶವ್ ಬಲಿರಾಂ ಹೆಡಗೆವಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಅಲ್ಲಿನ ಸಂದರ್ಶನ ಪುಸ್ತಕದಲ್ಲಿ ‘ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ನನ್ನ ಗೌರವ ಸಮರ್ಪಿಸಲು ಇಂದು ಇಲ್ಲಿಗೆ ಬಂದಿದ್ದೇನೆ’ ಎಂದು ಬರೆದರು. 

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ವರಿಷ್ಠ ಮೋಹನ್ ಭಾಗವತ್ ಇದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಪರೇಡ್‌ ನಡೆಸುತ್ತಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry