ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ

7
ಮೊದಲ ಬಾರಿಗೆ ಉನ್ನತ ಮಟ್ಟದ ಮಾತುಕತೆ

ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ

Published:
Updated:
ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ

ವಾಷಿಂಗ್ಟನ್/ಇಸ್ಲಾಮಾಬಾದ್: ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯಾವುದೇ ತಾರತಮ್ಯ ಇಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಅವರು ಪಾಕಿಸ್ತಾನದ ಸೇನೆ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಅವರಿಗೆ ಹೇಳಿದ್ದಾರೆ.

ಉಭಯ ರಾಷ್ಟ್ರಗಳಲ್ಲಿ ಪರಸ್ಪರ ರಾಜತಾಂತ್ರಿಕ ಅಧಿಕಾರಿಗಳ ಪ್ರಯಾಣದ ಮೇಲೆ ನಿರ್ಬಂಧ ವಿಧಿಸಿದ್ದ ನಂತರ ಇದೇ ಮೊದಲ ಬಾರಿಗೆ ಉನ್ನತ ಮಟ್ಟದ ಮಾತುಕತೆ ನಡೆಯಿತು.

‘ಪಾಂಪಿಯೊ ಹಾಗೂ ಬಜ್ವಾ ಅವರು ದೂರವಾಣಿಯಲ್ಲಿ ನಡೆಸಿದ ಮಾತುಕತೆಯಲ್ಲಿ, ದಕ್ಷಿಣ ಏಷ್ಯಾದಲ್ಲಿನ ಎಲ್ಲಾ ಭಯೋತ್ಪಾದಕ ಸಂಘಟನೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಬೇಕಿರುವ ಪ್ರಾಮುಖ್ಯತೆ, ಪಾಕಿಸ್ತಾನ–ಅಮೆರಿಕ ದ್ವಿಪಕ್ಷೀಯ ಬಾಂಧವ್ಯ ಸುಧಾರಿಸುವ ಕುರಿತು ಚರ್ಚಿಸಲಾಯಿತು’ ಎಂದು ಪಾಂಪಿಯೊ ಅವರ ವಕ್ತಾರ ತಿಳಿಸಿದ್ದಾರೆ.

ಅಫ್ಗನ್ ತಾಲಿಬಾನಿಗಳು ಹಾಗೂ ಹಕ್ಕಾನಿ ಜಾಲಕ್ಕೆ ಪಾಕಿಸ್ತಾನ ಸುರಕ್ಷಿತ ಅಡಗುತಾಣವಾಗಿದ್ದು, ಆಫ್ಗಾನಿಸ್ತಾನದಲ್ಲಿ ದಾಳಿ ನಡೆಸಲು ಈ ಸಂಘಟನೆಗಳಿಗೆ ಪಾಕ್ ನೆರವು ನೀಡುತ್ತಿದೆ ಎಂದು ಅಮೆರಿಕ ಮತ್ತು ಇತರೆ ರಾಷ್ಟ್ರಗಳು ದೀರ್ಘಾವಧಿಯಿಂದ ದೂರುತ್ತಿವೆ.

ವಾಷಿಂಗ್ಟನ್‌ನಲ್ಲಿನ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿರುವ ರಾಜತಾಂತ್ರಿಕ ಅಧಿಕಾರಿಗಳು ಅನುಮತಿ ಇಲ್ಲದೆ ನಗರದಿಂದ 25 ಮೈಲಿ ಆಚೆ ತಿರುಗಾಡುವಂತಿಲ್ಲ ಎಂದು ಅಮೆರಿಕ ನಿರ್ಬಂಧ ಹೇರಿತ್ತು. ಅದೇ ದಿನ ಪ್ರತಿಯಾಗಿ ಪಾಕಿಸ್ತಾನವೂ ಇಂತಹದೇ ನಿರ್ಬಂಧ ವಿಧಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry