ಆತುರದ ಕ್ರಮ ಬೇಡ: ಹೈಕೋರ್ಟ್‌

7
ಎಸ್‌ಸಿ, ಎಸ್‌ಟಿ ಆಯೋಗದ ಅಧ್ಯಕ್ಷರ ನೇಮಕ ರದ್ದು

ಆತುರದ ಕ್ರಮ ಬೇಡ: ಹೈಕೋರ್ಟ್‌

Published:
Updated:
ಆತುರದ ಕ್ರಮ ಬೇಡ: ಹೈಕೋರ್ಟ್‌

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಅಧ್ಯಕ್ಷ ಹುದ್ದೆಗೆ ಎ.ಮುನಿಯಪ್ಪ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಹುದ್ದೆಗೆ ಎಂ.ಆರ್. ವೆಂಕಟೇಶ್ ಅವರನ್ನು ನಾಮನಿರ್ದೇಶನ ಮಾಡಿದ್ದ ಆದೇಶ ರದ್ದುಗೊಳಿಸಿರುವ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂದುವರಿದು ಇದೇ 12ರವರೆಗೆ ಯಾವುದೇ ಆತುರದ ಕ್ರಮ ಜರುಗಿಸಬಾರದು’ ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಎ.ಮುನಿಯಪ್ಪ ಹಾಗೂ ಎಂ.ಆರ್. ವೆಂಕಟೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಮಧ್ಯಂತರ ನಿರ್ದೇಶನ ನೀಡಿದೆ.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಅರ್ಜಿದಾರರ ಆಕ್ಷೇಪಣೆ ಏನು?: ‘ಆದೇಶ ಹೊರಡಿಸುವುದಕ್ಕೂ ಮುನ್ನ ನಮಗೆ ನೋಟಿಸ್ ನೀಡಿಲ್ಲ. ಇದು ಸಹಜ ನ್ಯಾಯದ ಉಲ್ಲಂಘನೆ. ಅಲ್ಲದೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಸರ್ಕಾರ ಈ ಆದೇಶ ಮಾಡಿದೆ. ಸಚಿವ ಸಂಪುಟ ರಚನೆಯಾಗುವ ಮುನ್ನವೇ ಸರ್ಕಾರ ಆದೇಶ ಹೊಡಿರುವುದು ಸಂವಿಧಾನದ ಉಲ್ಲಂಘನೆ’ ಎಂಬುದು ಅರ್ಜಿದಾರರ ಆಕ್ಷೇಪ.

‘ನಮ್ಮ ನಾಮನಿರ್ದೇಶನ ರದ್ದುಪಡಿಸಿರುವ ಸರ್ಕಾರದ ಆದೇಶ ರದ್ದುಪಡಿಸಬೇಕು. ಆಯೋಗದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ನಿಗಮ-ಮಂಡಳಿಗಳ ಹಾಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ರದ್ದುಗೊಳಿಸಿದೆ.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry