ಜೈಲುಗಳಲ್ಲಿ ಸಾಮರ್ಥ್ಯ ಮೀರಿ ಕೈದಿಗಳ ಭರ್ತಿ: ಪಿಐಎಲ್‌ ದಾಖಲು

7

ಜೈಲುಗಳಲ್ಲಿ ಸಾಮರ್ಥ್ಯ ಮೀರಿ ಕೈದಿಗಳ ಭರ್ತಿ: ಪಿಐಎಲ್‌ ದಾಖಲು

Published:
Updated:

ಬೆಂಗಳೂರು: ಕಾರಾಗೃಹಗಳಲ್ಲಿ ಬ್ಯಾರಕ್‌ಗಳ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೈದಿಗಳನ್ನು ಇರಿಸಿರುವ ಮತ್ತು ಜೈಲುಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶಿಸಿರುವ ಕಾರಣ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಈ ಅರ್ಜಿ ದಾಖಲಿಸಿದ್ದಾರೆ. ಇದಿನ್ನೂ ವಿಚಾರಣೆಗೆ ಬರಬೇಕಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾರಾಗೃಹಗಳ ಡಿಜಿಪಿ, ನಗರ ಪೊಲೀಸ್ ಆಯುಕ್ತರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯ

ದರ್ಶಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿಯಲ್ಲಿ ಏನಿದೆ?: ಕೆಲ ಕಾರಾಗೃಹಗಳಲ್ಲಿ ನಿಗದಿತ ಮಿತಿಗಿಂತಲೂ ಒಂದೂವರೆ ಪಟ್ಟು ಹೆಚ್ಚಿನ ಪ್ರಮಾಣದಲ್ಲಿ ಕೈದಿಗಳನ್ನು ಇರಿಸಲಾಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಹೀಗಾಗಿ ಸಾಮರ್ಥ್ಯಕ್ಕೆ ಅನುಗುಣವಾಗಿ ಕೈದಿಗಳನ್ನು ಇರಿಸಲು, ಬಯಲು ಬಂದೀಖಾನೆ ಆರಂಭಿಸಲು ಮತ್ತು ಖಾಲಿಯಿರುವ ಸಿಬ್ಬಂದಿ ಹುದ್ದೆ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನಿರ್ದೇಶಿಸಬೇಕು.

ಈ ಕುರಿತಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವರದಿ ಪಡೆದು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ 2018ರ ಮೇ 8ರಂದು

ನಿರ್ದೇಶಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry