ಏಷ್ಯಾ ಕಪ್‌ ಟ್ವೆಂಟಿ–20 ಕ್ರಿಕೆಟ್: ಪಾಕ್‌ ವಿರುದ್ಧ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದ ಭಾರತ ಮಹಿಳಾ ತಂಡ

7

ಏಷ್ಯಾ ಕಪ್‌ ಟ್ವೆಂಟಿ–20 ಕ್ರಿಕೆಟ್: ಪಾಕ್‌ ವಿರುದ್ಧ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದ ಭಾರತ ಮಹಿಳಾ ತಂಡ

Published:
Updated:
ಏಷ್ಯಾ ಕಪ್‌ ಟ್ವೆಂಟಿ–20 ಕ್ರಿಕೆಟ್: ಪಾಕ್‌ ವಿರುದ್ಧ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದ ಭಾರತ ಮಹಿಳಾ ತಂಡ

ಕ್ವಾಲಾಲಂಪುರ: ಇಲ್ಲಿನ ನಡೆದ ಏಷ್ಯಾ ಕಪ್‌ ಟ್ವೆಂಟಿ–20 ಕ್ರಿಕೆಟ್ ಟೂರ್ನಿ ಪಾಕಿಸ್ತಾನ ಮಹಿಳಾ ತಂಡದ ವಿರುದ್ಧದ ಪಂದ್ಯದಲ್ಲಿ ಭಾರತ ಮಹಿಳಾ ತಂಡದವರು ಏಳು ವಿಕೆಟ್‌ ಜಯ ಸಾಧಿಸಿದ್ದಾರೆ.

ಭಾರತದ ವಿರುದ್ಧ ಟಾಸ್‌ ಗೆದ್ದ ಪಾಕಿಸ್ತಾನ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ‌

ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 72 ರನ್‌ ಗಳಿಸಿತು.

73 ರನ್‌ಗಳ ಗುರಿ ಬೆನ್ನತ್ತಿದ ಭಾರತ 16.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.

ಸ್ಮೃತಿ ಮಂದಾನ (38),  ಹರ್ಮನ್‌ಪ್ರೀತ್ ಕೌರ್‌ (34*) ರನ್‌ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry