ಭಾರಿ ಮಳೆ: ಪ್ರವಾಹ ಪರಿಸ್ಥಿತಿಯಲ್ಲಿ ಮುಂಬೈ

7

ಭಾರಿ ಮಳೆ: ಪ್ರವಾಹ ಪರಿಸ್ಥಿತಿಯಲ್ಲಿ ಮುಂಬೈ

Published:
Updated:
ಭಾರಿ ಮಳೆ: ಪ್ರವಾಹ ಪರಿಸ್ಥಿತಿಯಲ್ಲಿ ಮುಂಬೈ

ಮುಂಬೈ: ಮಹಾರಾಷ್ಟ್ರದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಶನಿವಾರ ಮತ್ತು ಭಾನುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.

ಸದ್ಯ ದಕ್ಷಿಣ ಕೊಂಕಣ, ಮರಾಠವಾಡ, ದಕ್ಷಿಣ ವಿದರ್ಭದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಉಳಿದಂತೆ ರತ್ನಗಿರಿ, ಸೋಲಾಪುರ, ಅದಿಲಾಬಾದ್‌ಗಳ ಮೂಲಕ ಮುಂಗಾರು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿ, ವಿಜ್ಞಾನಿ ಅಂಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಜೂನ್‌ 9ರಿಂದ 11ರ ವರೆಗೆ ನಗರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಭಾರೀ ಪ್ರಮಾಣದ ನೀರಿನಿಂದಾಗಿ ವಾರಾಂತ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

*

*

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry