ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕೊರತೆ

7
ಸೌಲಭ್ಯ ಕಲ್ಪಿಸದ ಅಧಿಕಾರಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ

ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕೊರತೆ

Published:
Updated:
ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕೊರತೆ

ಹುಮನಾಬಾದ್: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕೊರತೆಯಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಅಂದಿನ ಮೈಸೂರು ಸರ್ಕಾರ ಅವಧಿಯಲ್ಲಿ ನಿರ್ಮಾಣಗೊಂಡಿರುವ ಕೇಂದ್ರ ಬಸ್‌ ನಿಲ್ದಾಣವನ್ನು 2008ರಲ್ಲಿ ₹4 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದೆ.

ಅಭಿವೃದ್ಧಿಗೆ ಹಣದ ಕೊರತೆ ಬಿದ್ದಾಗ ಈ ಕ್ಷೇತ್ರದ ಶಾಸಕರಾಗಿದ್ದ ರಾಜಶೇಖರ ಬಿ.ಪಾಟೀಲ ಅವರು ಹೆಚ್ಚುವರಿಯಾಗಿ ₹2 ಕೋಟಿ ಅನುದಾನ ತಂದು ಅಧುನಿಕ ಆಸನ ಸೇರಿಮತ್ತಿತರ ಸೌಲಭ್ಯ ಕಲ್ಪಿಸಿದ್ದರು.

ಆದರೆ, ಸದ್ಯ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಕುಡಿಯುವ ನೀರಿನ ಸೌಲಭ್ಯವಿಲ್ಲ. ತಿಂಗಳಲ್ಲಿ ಕನಿಷ್ಠ ಒಂದು ವಾರ ನಿಲ್ದಾಣದಲ್ಲಿ ವಿದ್ಯುತ್‌ ಸೌಲಭ್ಯ ಇರುವುದಿಲ್ಲ. ಪ್ರಯಾಣಿಕರಿಂದ ತೆರಿಗೆ ವಸೂಲಿ ಮಾಡುವ ವಿಷಯದಲ್ಲಿ ತೋರಿಸುತ್ತಿರುವ ಆಸಕ್ತಿಯನ್ನು ಸಂಸ್ಥೆ ಅಧಿಕಾರಿಗಳು ಕನಿಷ್ಠ ಸೌಲಭ್ಯ ಕಲ್ಪಿಸುವ ವಿಷಯದಲ್ಲಿ ತೋರಿಸುತ್ತಿಲ್ಲ.

ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಸೇತುವೆಯಾದ ಹುಮನಾಬಾದ್‌ ಬಸ್‌ ನಿಲ್ದಾಣದ ಮೂಲಕ ಪ್ರತಿನಿತ್ಯ ಕನಿಷ್ಠ 300ಕ್ಕೂ ಹೆಚ್ಚು ಬಸ್‌ ಸಂಚರಿಸುತ್ತವೆ. ತಾಲ್ಲೂಕಿನ ಗ್ರಾಮೀಣ ಭಾಗದಿಂದ ಬೀದರ್‌–ಕಲಬುರ್ಗಿಗೆ ಜನರು ಪ್ರಯಾಣಿಸುತ್ತಾರೆ.

ಸಂಬಂಧಪಟ್ಟವರು ಗಮನ ಹರಿಸಿ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಬೇಕು ಎಂಬುದು ಪ್ರಯಾಣಿಕರ ಆಗ್ರಹ.

ಬಾವಿಯಲ್ಲಿ ನೀರು ಖಾಲಿಯಾದ ಕಾರಣ ನೀರಿನ ಸಮಸ್ಯೆ ಆಗಿದೆ. ಶೌಚಾಲಯಕ್ಕೂ ಬೀಗ ಹಾಕಲಾಗಿದೆ. ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು

ಗೋವಿಂದ ನಕಲಾ, ಪ್ರಭಾರ ವ್ಯವಸ್ಥಾಪಕ 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry