ಅಸಮಾಧಾನ ಶೀಘ್ರ ಶಮನ: ಸಚಿವ ಖಾದರ್

7

ಅಸಮಾಧಾನ ಶೀಘ್ರ ಶಮನ: ಸಚಿವ ಖಾದರ್

Published:
Updated:

ಮಂಗಳೂರು: ಸಚಿವ ಸ್ಥಾನ ವಂಚಿತರಲ್ಲಿ ಕೆಲವರಿಗೆ ಅಸಮಾಧಾನವಾಗಿದ್ದು, ಶೀಘ್ರದಲ್ಲಿಯೇ ಕಾಂಗ್ರೆಸ್‌ ಹೈಕಮಾಂಡ್‌ ಇದನ್ನು ಪರಿಹರಿಸಲಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಕಾಂಗ್ರೆಸ್‌ ಮುಖಂಡರು ಒಗ್ಗಟ್ಟಾಗಿದ್ದು, ಯಾವುದೇ ಭಿನ್ನಮತವಿಲ್ಲ. ಅದಾಗ್ಯೂ ಕೆಲವರಲ್ಲಿ ಉಂಟಾಗಿರುವ ಅಸಮಾಧಾನವನ್ನು ಪಕ್ಷದ ವರಿಷ್ಠರು ಪರಿಹರಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟದ ಸರ್ಕಾರ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ರಾಜ್ಯದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ವಾರ್ಷಿಕ ಆದಾಯದ ಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗುತ್ತಿದ್ದು, ಈ ಕುರಿತು ಸೋಮವಾರ ವಸತಿ ಇಲಾಖೆ ಅಧಿಕಾರಿಗಳ ಜತೆ ಸಭೆ ಸೇರಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry