16ರ ನಂತರ ಶಿಕ್ಷಕರ ವರ್ಗಾವಣೆ
ಬೆಂಗಳೂರು: ಚುನಾವಣೆಗಳು ಮುಗಿಯುತ್ತಿದ್ದಂತೆ ಸರ್ಕಾರಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶುರುವಾಗಲಿದೆ.
‘ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಲು ಇಲಾಖೆಯಲ್ಲಿ ಅಗತ್ಯ ಸಿದ್ಧತೆಗಳು ನಡೆದಿವೆ. ನೀತಿ ಸಂಹಿತೆ ಮುಕ್ತಾಯವಾಗುತ್ತಿದ್ದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿ, ಅನುಮತಿ ದೊರೆತ ತಕ್ಷಣವೇ ಪ್ರಕ್ರಿಯೆ ಪ್ರಾರಂಭಿಸುತ್ತೇವೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಂ.ಟಿ. ರೇಜು ತಿಳಿಸಿದರು.
‘ಕೌನ್ಸೆಲಿಂಗ್ ಪ್ರಕ್ರಿಯೆ ಪ್ರಾರಂಭಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಆದರೆ, ಆ ಬಗ್ಗೆ ಯಾವುದೇ ಉತ್ತರ ಬಂದಿಲ್ಲ’ ಎಂದು ಹೇಳಿದರು.
ಪ್ರತಿಕ್ರಿಯಿಸಿ (+)