ಹೊರಟ್ಟಿಗೆ ಸಚಿವ ಸ್ಥಾನ ಸಿಗಬೇಕು: ಜಗದೀಶ ಶೆಟ್ಟರ್

7

ಹೊರಟ್ಟಿಗೆ ಸಚಿವ ಸ್ಥಾನ ಸಿಗಬೇಕು: ಜಗದೀಶ ಶೆಟ್ಟರ್

Published:
Updated:

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರಿಗೆ ಸದ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಬೇಕು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೇಳಿದರು.

ಹುಬ್ಬಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹೊರಟ್ಟಿ ಅವರಂತಹ ಮುತ್ಸದ್ದಿಯನ್ನು ಸಚಿವ ಸ್ಥಾನಕ್ಕೆ ಪರಿಗಣಿಸದಿರುವುದು ಆಶ್ಚರ್ಯ ತಂದಿದೆ ಎಂದರು.

ಕೇವಲ ಎಂಟನೇ ಕ್ಲಾಸ್ ಓದಿರುವ ಜಿ.ಟಿ. ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ಕೊಟ್ಟಿದ್ದಾರೆ. ಅಂತಹವರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಏನು ತಾನೇ ಮಾತನಾಡುತ್ತಾರೆ. ಅವರ ಬದಲು ಶಿಕ್ಷಣ ಕ್ಷೇತ್ರದ ಬಗ್ಗೆ ಜ್ಞಾನ ಇರುವ ಹೊರಟ್ಟಿ ಅವರನ್ನು ಸಚಿವರನ್ನಾಗಿ ಮಾಡಿದ್ದರೆ, ಆ ಸ್ಥಾನಕ್ಕೆ ಘನತೆ ತಂದು ಕೊಡುತ್ತಿದ್ದರು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry