ಉಚಿತ ಬಸ್‌ಪಾಸ್‌ಗೆ ವಿದ್ಯಾರ್ಥಿಗಳ ಆಗ್ರಹ

7
ಪಾಸ್‌ಗೆ ಪೂರ್ಣ ಹಣ ಪಾವತಿಸಲು ಸಾರಿಗೆ ಅಧಿಕಾರಿಗಳ ಆದೇಶ; ಖಂಡನೆ

ಉಚಿತ ಬಸ್‌ಪಾಸ್‌ಗೆ ವಿದ್ಯಾರ್ಥಿಗಳ ಆಗ್ರಹ

Published:
Updated:

ಕಲಬುರ್ಗಿ: ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವಂತೆ ಒತ್ತಾಯಿಸಿ ಶಾಲಾ– ಕಾಲೇಜು ವಿದ್ಯಾರ್ಥಿಗಳು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರದರ್ಶನ ಮಾಡಿದರು.

ಉಚಿತ ಬಸ್‌ಪಾಸ್‌ಗೆ ಒತ್ತಾಯಿಸಿ ಈಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದರು. ಆದರೆ, ಪೂರ್ಣ ಹಣವನ್ನು ಪಾವತಿಸಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಹಾಗೂ ಗೊಂದಲ ಉಂಟಾಗಿದೆ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಉಚಿತ ಬಸ್‌ಪಾಸ್ ನೀಡುವ ಬಗ್ಗೆ ತಕ್ಷಣ ಆದೇಶ ಹೊರಡಿಸಬೇಕು. ಅಲ್ಲಿಯವರೆಗೆ ಹಿಂದಿನ ವರ್ಷದ ಪಾಸ್‌ ಅನ್ನು ಪರಿಗಣಿಸಬೇಕು. ಸೆಮಿಸ್ಟರ್ ವಿದ್ಯಾರ್ಥಿಗಳಿಗೆ 12 ತಿಂಗಳು ಪಾಸ್ ನೀಡಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿನಾಥ ಸಿಂಗೆ, ಜಿಲ್ಲಾ ಕಾರ್ಯದರ್ಶಿ ಎಸ್‌.ಎಚ್.ಹಣಮಂತ, ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ನಾಡಗೌಡ, ಅಶ್ವಿನಿ, ಅಭಯಾ, ಸ್ನೇಹಾ, ಶಿವಕುಮಾರ್, ಎಸ್.ಬಿ.ಮಹೇಶ್, ವಿ.ಕೆ.ಶರಣು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry