ಆತಂಕ ಮೂಡಿಸಿದ್ದ ಹುಲಿ ಸೆರೆ

7

ಆತಂಕ ಮೂಡಿಸಿದ್ದ ಹುಲಿ ಸೆರೆ

Published:
Updated:

ಮೈಸೂರು: ನಂಜನಗೂಡು ತಾಲ್ಲೂಕು ಹೆಡಿಯಾಲ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆ ಹಿಡಿದಿದ್ದಾರೆ.

ಎರಡು ದಿನಗಳ ಹಿಂದೆ ಹಸುವಿನ ಮೇಲೆ ದಾಳಿ ನಡೆಸಿತ್ತು. ಹೀಗಾಗಿ, ಹುಲಿ‌ ಸೆರೆಗೆ ಬಲೆ ಬೀಸಿದ್ದರು. ಅರಿವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ಗಾಯಗೊಂಡಿರುವ ಹುಲಿಯನ್ನು ಮೈಸೂರು ಮೃಗಾಲಯದ ಕೂರ್ಗಳ್ಳಿ ಪುನರ್ವಸತಿ ಮತ್ತು ರಕ್ಷಣಾ ಕೇಂದ್ರಕ್ಕೆ ಸಾಗಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸುಮಾರು 30 ಸಿಬ್ಬಂದಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry