‘ಎಲ್ಲರೂ ಸಮಾಧಾನಗೊಂಡಿದ್ದಾರೆ’

7

‘ಎಲ್ಲರೂ ಸಮಾಧಾನಗೊಂಡಿದ್ದಾರೆ’

Published:
Updated:

ಬಾಗಲಕೋಟೆ: ‘ಸಚಿವ ಸ್ಥಾನ ಸಿಗದ ಕಾರಣ ಈಗ ಯಾವುದೇ ಶಾಸಕರೂ ಅತೃಪ್ತಿ ಹೊಂದಿಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ತಾಲ್ಲೂಕು ನೀಲಗುಂದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಿನ್ನಮತದ ಬಗ್ಗೆ ಹೈಕಮಾಂಡ್ ಜೊತೆಯೂ ಮಾತನಾಡಿದ್ದೇನೆ. ಈ ವಿಚಾರದಲ್ಲಿ ದೆಹಲಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ. ಹಾಗಾಗಿ ಅಲ್ಲಿಗೆ ಹೋಗಿಲ್ಲ. ಫೋನ್ ಮೂಲಕವೇ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಕರೆದು ಕೇಳಿದರೆ ನನ್ನ ಅಭಿಪ್ರಾಯ ತಿಳಿಸುವೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry