‘ಯಾದವರಿಗೆ ಸಚಿವ ಸ್ಥಾನ ನೀಡಿ’

7
ಕೃಷ್ಣ ಯಾದವಾನಂದ ಸ್ವಾಮೀಜಿ ಒತ್ತಾಯ

‘ಯಾದವರಿಗೆ ಸಚಿವ ಸ್ಥಾನ ನೀಡಿ’

Published:
Updated:

ಚಿತ್ರದುರ್ಗ: ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾದವ ಸಮುದಾಯದ ಜನಪ್ರತಿನಿಧಿಗೆ ಸಚಿವ ಸ್ಥಾನ ನೀಡದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಧರಣಿ ನಡೆಸಲಾಗುವುದು’ ಎಂದು ಯಾದವ ಮಠದ ಕೃಷ್ಣ ಯಾದವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಯಾದವ ಸಮುದಾಯದ ಎ.ಕೃಷ್ಣಪ್ಪ ಸಚಿವರಾಗಿದ್ದರು. ಆ ಬಳಿಕ ಅಧಿಕಾರಕ್ಕೆ ಬಂದ ಯಾವ ಪಕ್ಷಗಳೂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿಲ್ಲ. ವಿಧಾನಪರಿಷತ್‌ ಸದಸ್ಯರಾದ ಜಯಮ್ಮ ಬಾಲರಾಜ್‌ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಬೇಕು’ ಎಂದು ಒತ್ತಾಯಿಸಿದರು. ‘ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲ ಜಾತಿಯ ಪ್ರಮುಖರಿಗೆ ಸಚಿವ ಸ್ಥಾನ ಸಿಗುತ್ತಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಯಾದವರಿಗೆ ಪ್ರಾತಿನಿಧ್ಯ ನೀಡುವ ಅಗತ್ಯವಿದೆ’ ಎಂದರು.

‘ರಾಜ್ಯದಲ್ಲಿ 40 ಲಕ್ಷ ಜನಸಂಖ್ಯೆ ಹೊಂದಿರುವ ಸಮುದಾಯ ರಾಜಕೀಯವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ’

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry