‘ಮೌಲ್ಯಾಧಾರಿತ ಶಿಕ್ಷಣಕ್ಕೆ ಗಮನ ಹರಿಸಿ’

7

‘ಮೌಲ್ಯಾಧಾರಿತ ಶಿಕ್ಷಣಕ್ಕೆ ಗಮನ ಹರಿಸಿ’

Published:
Updated:

ಬೆಂಗಳೂರು: ‘ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಶಾಲೆಗಳು ಗಮನಹರಿಸದೇ ಇರುವುದು ವ್ಯವಸ್ಥೆಯ ದುರದೃಷ್ಟ’ ಎಂದು ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ವಿಷಾದಿಸಿದರು.

ಬ್ಯಾಟರಾಯನಪುರ ಕ್ಷೇತ್ರದ ಹೊಸಹಳ್ಳಿಯಲ್ಲಿ ಎಸ್.ಬಿ.ಪೀಪಲ್ ಎಜುಕೇಷನಲ್ ಟ್ರಸ್ಟ್ ವತಿಯಿಂದ ಆರಂಭಿಸಲಾದ ವಿದ್ಯಾವಿಕಾಸ ಇಂಟರ್‌ನ್ಯಾಷನಲ್‌ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ನಮ್ಮ ಸಂಸ್ಕೃತಿ, ಭಾಷೆ, ಹುಟ್ಟಿದ ನೆಲ ಮತ್ತು ದೇಶಾಭಿಮಾನದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವಂತಹ ವ್ಯವಸ್ಥೆ ಕಲ್ಪಿಸಿಕೊಡಬೇಕು’ ಎಂದು ಸಲಹೆ ನೀಡಿದರು.

ಸಂಸ್ಥೆಯ ಸಂಸ್ಥಾಪಕ ಭದ್ರಯ್ಯ ಮಾತನಾಡಿ, ‘ಇತ್ತೀಚೆಗೆ ಶಿಕ್ಷಣ ಕ್ಷೇತ್ರವು ಸರಿಪಡಿಸಲಾಗದಷ್ಟು ಹದಗೆಟ್ಟಿದೆ. ಹಾಗಾಗಿ ದೇಸಿ ಭಾಷೆ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ’ ಎಂದರು. ನಿವೃತ್ತ ಪ್ರಾಧ್ಯಾಪಕ ಸತ್ಯಪ್ರಕಾಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry