‘ಗಿಡ ನೆಡುವ ಮನೋಭಾವ ಬೆಳೆಯಲಿ’

7

‘ಗಿಡ ನೆಡುವ ಮನೋಭಾವ ಬೆಳೆಯಲಿ’

Published:
Updated:

ಸಾಗರ: ಸಭೆ, ಸಮಾರಂಭಗಳಲ್ಲಿ, ಶುಭ ಕಾರ್ಯಗಳಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡುವ ಪ್ರವೃತ್ತಿ ಬೆಳೆಯಬೇಕು ಎಂದು ಎಂಡಿಎಫ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶಶಿಧರಪ್ಪ ಗೌಡರ್ ಹೇಳಿದರು.

ಎಂಡಿಎಫ್ ಸ್ವತಂತ್ರ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈಚೆಗೆ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇವಲ ಪರಿಸರ ದಿನಾಚರಣೆ, ಭಾಷಣ, ಘೋಷಣೆಗಳಿಂದ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ನಾವು ವಾಸಿಸುವ, ಕೆಲಸ ಮಾಡುವ ಸ್ಥಳ ಸೇರಿದಂತೆ ಎಲ್ಲೆಲ್ಲಿ ಸಾಧ್ಯವಿದೆಯೋ ಅಂತಹ ಪ್ರದೇಶಗಳಲ್ಲಿ ಗಿಡ ನೆಡುವ ಜೊತೆಗೆ ಅವುಗಳನ್ನು ಪೋಷಿಸಿ ಬೆಳೆಸುವ ಮನೋಭಾವ ನಮ್ಮದಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಡಿಎಫ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪವಿತ್ರಾ ಎಸ್.ಜಿ. ಭಟ್ ಮಾತನಾಡಿ, ‘ನಮ್ಮ ಸುತ್ತಲಿನ ಪರಿಸರವನ್ನು ಚೊಕ್ಕಟವಾಗಿಟ್ಟುಕೊಳ್ಳದೆ ನಮ್ಮ ಆರೋಗ್ಯವನ್ನು ನಾವೇ ಹಾಳುಮಾಡಿಕೊಳ್ಳುತ್ತಿದ್ದೇವೆ. ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಹೆಚ್ಚು ಪರಿಣಾಮಕಾರಿ’ ಎಂದು ಹೇಳಿದರು.

ಪರಿಸರ ಸಂರಕ್ಷಣೆ ಕುರಿತು ಅಂಜಲಿ, ದಿವ್ಯಾ ಮಾತನಾಡಿದರು. ನಿಖಿಲ್ ವಿ. ಕುಂಸಿ, ಪ್ರವೀಣ್, ಸಿಂಧು, ಗೀತಾ, ನೂರೇಂದ್ರ, ಜಿ.ಪಿ. ಶ್ರೀಪಾದ ಇದ್ದರು. ಬಿ.ಜಿ. ಮಂಜಪ್ಪ ಸ್ವಾಗತಿಸಿದರು. ರೇಖಾ ವಂದಿಸಿದರು. ರೂಪಾದೇವಿ ನಿರೂಪಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry