ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರ: ಏಮ್ಸ್‌

7

ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರ: ಏಮ್ಸ್‌

Published:
Updated:
ಅಟಲ್‌ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರ: ಏಮ್ಸ್‌

ನವದೆಹಲಿ: ಇಂದು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌(ಏಮ್ಸ್‌) ಹೇಳಿದೆ.

ಹಲವು ವರ್ಷಗಳಿಂದ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಇಂದು(ಸೋಮವಾರ) ಬೆಳಿಗ್ಗೆ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು.

ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ. ಡಾ.ರಣದೀಪ್‌ ಗುಲೇರಿಯಾ ಅವರ ನೇತೃತ್ವದ ವೈದ್ಯರ ತಂಡ ವಾಜಪೇಯಿ ಅವರ ಆಗೋಗ್ಯದ ನಿಗಾವಹಿಸಿದ್ದಾರೆ ಎಂದು ಏಮ್ಸ್‌ ಅಧಿಕಾರಿಗಳು ಅಧಿಕೃತವಾಗಿ ತಿಳಿಸಿದ್ದಾರೆ.

ವಾಜಪೇಯಿ ಅವರು ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಏಮ್ಸ್‌ನ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ವಾಜಪೇಯಿ ಅವರಿಗೆ ಈಗ 93 ವರ್ಷ ವಯಸ್ಸು. ವಾಜಪೇಯಿ ಅವರು 1998ರಿಂದ 2004ರವರೆಗೆ ಎನ್‌ಡಿಎ ಮೈತ್ರಿಕೂಟದ ಸರ್ಕಾರವನ್ನು ಮುನ್ನಡೆಸಿದ್ದ ಮತ್ಸದ್ದಿ ನಾಯಕ.

ವಾಜಪೇಯಿ ಭೇಟಿಗೆ ಏಮ್ಸ್‌ಗೆ ತೆರಳಿದ ರಾಹುಲ್‌ 

ಆರೋಗ್ಯ ತಪಾಸಣೆ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ವಾಜಪೇಯಿ ಅವರನ್ನು ಭೇಟಿ ಮಾಡಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಏಮ್ಸ್‌ಗೆ ತೆರಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry