ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

7

ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Published:
Updated:
ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ: ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ವೇದಿಕೆಯ ಕಾರ್ಯಕರ್ತರು ಹಿರಿಯ ರಾಜಕಾರಣಿ ಹಾಗೂ ಶೋಷಿತ ವರ್ಗಗಳ ನಾಯಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾ ಸಂಯೋಜಕ ಶ್ರೀಶೈಲ್ ಅಂಟಿನ, ‘ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉದ್ದೇಶಪೂರ್ವಕವಾಗಿ ಜಾರಕಿಹೊಳಿ ಅವರನ್ನು ಸಂಪುಟದಿಂದ ಹೊರಗಿಡಲಾಗಿದೆ. ಈ ರೀತಿಯ ಅನ್ಯಾಯವನ್ನು ಸರಿಪಡಿಸದಿದ್ದಲ್ಲಿ ಮುಂದಿನ ದಿನಮಾನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೂ ತಕ್ಕ ಪರಿಣಾಮ ಎದುರಿಸಲಿದೆ’ ಎಂದು ಎಚ್ಚರಿಸಿದರು.

‘ಜಾರಕಿಹೊಳಿ ಅವರು ರಾಜ್ಯದ ಪ್ರತಿಯೊಂದು ತಾಲ್ಲೂಕುಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ತೊರೆದರೆ ರಾಜ್ಯ ಮತ್ತೊಂದು ಉತ್ತರ ಪ್ರದೇಶವಾಗಲಿದೆ. ದಲಿತರು ಹಾಗೂ ಅಲ್ಪಸಂಖ್ಯಾತರು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತೊರೆದಿರುವುದರಿಂದ ಅಲ್ಲಿ ಪಕ್ಷ ತಲೆ ಎತ್ತಲು ಕೂಡ ಒದ್ದಾಡುತ್ತಿದೆ. ರಾಜ್ಯದಲ್ಲಿ ಆ ರೀತಿ ಆಗಬಾರದೆಂದರೆ, ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry